ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಖಾತ್ರಿ'ಯಿಂದ ದುಡಿಯುವ ಕೈಗಳಿಗೆ ಉದ್ಯೋಗ: ಪ್ರಕಾಶ್

Srinivasa Murthy VN
Updated On : 26 Nov 2013, 1:05 am

ಹಾರನಹಳ್ಳಿ: ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಸಾಧ್ಯ ಎಂಬ ಗಾಂಧೀಜಿಯವರ ಆಶಯದಂತೆ ದೇಶದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದ ದುಡಿಯುವ ಕೈಗಳಿಗೆ ಉದ್ಯೋಗ ಸಿಗುತ್ತಿದೆ ಎಂದು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪ್ರಕಾಶ್ ತಿಳಿಸಿದರು.
ಹಾರನಹಳ್ಳಿ ಗ್ರಾಪಂ.ಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಾರನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 14 ಕಾಮಗಾರಿಗಳ 50 ಲಕ್ಷ ಕ್ರಿಯಾಯೋಜನೆಯ 5 ಕಾಮಗಾರಿಗಳ ಮುಗಿದಿದ್ದು, 9 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು. ಈ ಕಾಮಗಾರಿ ಅನುಷ್ಠಾನದ ಬಗ್ಗೆ ಲೋಪದೋಷಗಳಿದ್ದರೆ ಸಾರ್ವಜನಿಕವಾಗಿ, ಮುಕ್ತವಾಗಿ ಗ್ರಾಮಸ್ಥರು ದೂರು ಸಲ್ಲಿಸುವಂತೆ ಸೂಚಿಸಿದರು. ಈ ಕಾರ್ಯಕ್ರಮ ಹಾರನಹಳ್ಳಿ ಗ್ರಾಪಂ ಅಧ್ಯಕ್ಷೆ ರೇಣುಕ, ಗ್ರಾಪಂ ಉಪಾಧ್ಯಕ್ಷ ಬಸವರಾಜು, ಗ್ರಾಪಂ ಮಾಜಿ ಅಧ್ಯಕ್ಷ ಕರೀಂಸಾಬ್, ಶಿವಲಿಂಗಮೂರ್ತಿ, ಓಂಕಾರಮೂರ್ತಿ, ಗ್ರಾಮಸ್ಥರು ಇದ್ದರು. ಪಿಡಿಒ ಶಾರದಮ್ಮ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement