ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹಲ್ಮಿಡಿ ಗ್ರಾಮ ಪ್ರವಾಸಿ ಕೇಂದ್ರಕ್ಕೆ ಆಗ್ರಹ

Srinivasa Murthy VN
Updated On : 26 Nov 2013, 1:03 am

ಕ.ಪ್ರ.ವಾರ್ತೆ ಬೇಲೂರು ನ.25
ಸರ್ಕಾರ ಪ್ರಥಮ ಕನ್ನಡ ಶಿಲಾಶಾಸನ ದೊರೆತ ಹಲ್ಮಿಡಿ ಗ್ರಾಮವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಲು ಮುಂದಾಗುವಂತೆ ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಬಿ.ಎನ್. ಜಗದೀಶ್ ಒತ್ತಾಯಿಸಿದ್ದಾರೆ.
ತಾಲೂಕಿನ ಅರೇಹಳ್ಳಿ ಹೋಬಳಿ ನಾರ್ವೆ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ 58ನೇ ಕನ್ನಡ ರಾಜೋತ್ಸವದಲ್ಲಿ ಮಾತನಾಡಿ, ಹಲ್ಮಿಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಇದುವರೆಗೂ ಒತ್ತು ನೀಡಿಲ್ಲ. ಕೂಡಲೇ ಈ ಬಗ್ಗೆ ಗಮನಹರಿಸುಂತೆ ಆಗ್ರಹಿಸಿದರು.
ಜಯ ಕರ್ನಾಟಕ ಸಂಘಟನೆ ರಾಜ್ಯದ ಬಡ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಗೆ ತರುವಂತೆ ರಾಜ್ಯಾದ್ಯಂತ ಹೋರಾಟ ನಡೆಸಿದ್ದು, ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸುವುದು ಸೂಕ್ತ ಎಂದು ಹೇಳಿದರು. ಮಲೆನಾಡು ಪ್ರದೇಶಗಳ ರಸ್ತೆಗಳು ತೀವ್ರವಾಗಿ ಹಾಳಾಗಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ತಿಳಿಸಿದರು.
ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಐ.ಎನ್. ಅರುಣ್‌ಕುಮಾರ್ ಮಾತನಾಡಿ,  ಪ್ರಸ್ತುತ ಸಂದರ್ಭದಲ್ಲಿ ಕನ್ನಡ ಭಾಷೆಯ ಉಳಿವಿಗೆ ಹೋರಾಟ ಅನಿವಾರ್ಯ. ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಿದೆ. ಆದರೆ ರಾಜಧಾನಿಯಲ್ಲೇ ಕನ್ನಡ ಭಾಷೆ ಬಳಕೆ ಕಡಿಮೆಯಾಗಿದ್ದು, ಕನ್ನಡ ನಾಡಿನಲ್ಲಿರುವ ಜನರು ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ರಾಮಚಂದ್ರಯ್ಯ, ಸುದೀಪ್ ಕುಮಾರ್, ಮಂಜುನಾಥ್, ಜಿಲ್ಲಾಧ್ಯಕ್ಷ ಎಸ್. ಉಮೇಶ್, ಗೌರವ ಅಧ್ಯಕ್ಷ ಸುದರ್ಶನ್, ಅರೇಹಳ್ಳಿ ಹೋಬಳಿ ಅಧ್ಯಕ್ಷ ಮಲ್ಲಿಕಾರ್ಜುನ್ ಇತರರು ಹಾಜರಿದ್ದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಹಿರಿಯ ಉಪಾಧ್ಯಕ್ಷ ಡಿ. ರಾಜಪ್ಪ, ಸಿದ್ದೇಗೌಡ ಅವರನ್ನು ಸನ್ಮಾನಿಸಲಾಯಿತು. ನಾರ್ವೆ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾವಳಿಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ಬಾಲಕಿಯರನ್ನು ಅಭಿನಂದಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement