ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಲಿಖಿತ ಪರೀಕ್ಷಾ ತರಬೇತಿ ಶಿಬಿರ

Rashmi Kasaragodu
Updated On : 27 Nov 2013, 1:26 am

ಹಾಸನ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಗ್ರೇಡ್ಡಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗಾಗಿ ಪರೀಕ್ಷಾ ಪೂರ್ವಭಾವಿ ತರಬೇತಿ ಶಿಬಿರವನ್ನು ಉಚಿತವಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇಲಾಖೆಯ ಕಾರ್ಯಕ್ರಮವಾದ ಸ್ಟಡಿ ಸರ್ಕಲ್ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಪರೀಕ್ಷಾ ಪೂರ್ವ ತರಬೇತಿ ಶಿಬಿರದಲ್ಲಿ ಅನುಭವಿ ನುರಿತ ಸಂಪನ್ಮೂಲ ಉಪನ್ಯಾಸಕರಿಂದ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.  ಆಸಕ್ತ ಅಭ್ಯರ್ಥಿಗಳು ನ.30 ರವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 5 ರವರೆಗೆ ನಡೆಯುವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಹೆಚ್ಚಿನ ಅನುಭವ ಪಡೆಯುವಂತೆ ಕೋರಲಾಗಿದೆ. ಆಸಕ್ತರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ  ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಮಾಹಿತಿಗೆ ದೂ-08172-268374 ಇಲ್ಲಿಗೆ ಸಂಪರ್ಕಿಸಲು ಉದ್ಯೋಗಾಧಿಕಾರಿ ಜೆ.ಬಿ.ವಿಜಯಲಕ್ಷ್ಮಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement