ಇಂದು ವಿಕಲಚೇತನರ ದಿನಾಚರಣೆ
ಹಾಸನ: ಜಿಲ್ಲಾಡಳಿತ ಮತ್ತು ಜಿಪಂ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಹಾಸನ ಹಾಗೂ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿಕಲಚೇತನರ ಸಂಘ- ಸಂಸ್ಥೆಗಳ ಆಶ್ರಯದಲ್ಲಿ ನ.29ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಆಚರಿಸಲಾಗುವುದು. ಈ ಪ್ರಯುಕ್ತ ಜಿಲ್ಲೆಯ ವಿಕಲಚೇತನರು ಮತ್ತು ವಿಶೇಷ ಶಾಲೆಗಳ ಮಕ್ಕಳಿಗೆ ನಾನಾ ಆಟೋಟ ಸ್ಪರ್ಧೆಗಳನ್ನು ಬೆಳಗ್ಗೆ 10ಕ್ಕೆ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಕ್ರಾಸ್, ಕೆ.ಆರ್. ಪುರಂ, ಹಾಸನ ಇವರನ್ನು ಸಂಪರ್ಕಿಸಬಹುದು. ದೂ. 08172-264546.