ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಗರ್‌ಹುಕುಂ ಸಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Mainashree
Updated On : 28 Nov 2013, 9:03 am

ಕ.ಪ್ರ.ವಾರ್ತೆ  ಹಾಸನ  ನ.28
ಬಗರ್‌ಹುಕುಂ ಸಾಗುವಳಿ ಸಕ್ರಮಗೊಳಿಸಿ ಭೂ ರಹಿತರಿಗೆ ಭೂಮಿ ನೀಡುವಂತೆ ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಧರಣಿ ನಡೆಸಿ, ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಬಿ.ಸಿ. ರಾಜೇಶ್ ಮಾತನಾಡಿ, 2009ರಲ್ಲಿ ಸರ್ಕಾರಿ ಭೂಮಿಯನ್ನು ರಕ್ಷಣೆ ಮಾಡಲು ನಿವೃತ್ತ ಐಎಎಸ್ ಅಧಿಕಾರಿ ವಿ. ಬಾಲಸುಬ್ರಹ್ಮಣಿಯನ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ಒಂದು ಸಮಿತಿ ರಚನೆ ಮಾಡಿತು. ಆ ಸಮಿತಿಯು  2011ರ ವರದಿಯನ್ನು ಸಲ್ಲಿಸಿದೆ. ಆ ವರದಿಯ ಪ್ರಕಾರ ರಾಜ್ಯಾದ್ಯಂತ ಸುಮಾರು 12ರಿಂದ 15 ಲಕ್ಷ ಎಕರೆ ಸರ್ಕಾರಿ ಭೂಮಿ ಅನಧಿಕೃತವಾಗಿ ಒತ್ತುವರಿಯಾಗಿದೆ ಎಂದು ತಿಳಿಸಿದರು.  
1991 ಮತ್ತು 1999ರ ಅವಧಿಯಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಲಮತ್ತು ನಂತರ ದಿನಗಳಲ್ಲಿ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಭೂ ರಹಿತರು, ಸಣ್ಣ ಹಿಡುವಳಿದಾರರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಆಗ್ರಹಿಸಿದರು.
ಸರ್ಕಾರದ ಸೀಲಿಂಗ್ ಲಿಮಿಟ್‌ಗಿಂತ ಹೆಚ್ಚುವರಿ ಭೂಮಿಯನ್ನು ಹೊಂದಿರುವ ಭೂ ಮಾಲೀಕರಿಂದ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡು ಭೂ ರಹಿತರಿಗೆ ಹಂಚಟಿಕೆ ಮಾಡಬೇಕು. ಎಲ್ಲಾ ಕಾರ್ಯಗಳನ್ನು ನಿರ್ವಹಿಸಲು ಸರ್ಕಾರ ತಕ್ಷಣ ಭೂನ್ಯಾಯ ಮಂಡಳಿಗಳನ್ನು ರಚನೆ ಮಾಡಬೇಕರು. ರಾಜ್ಯದ ಶೇ.80ರಷ್ಟು ಹಳ್ಳಿಗಳಲ್ಲಿ ಸ್ಮಶಾನ ಭೂಮಿ ಇಲ್ಲದಿರುವುದರಿಂದ ಸರ್ಕಾರ ತಕ್ಷಣ ಎಲ್ಲಾ ಹಳ್ಳಿ ಮತ್ತು ನಗರ ಪ್ರದೇಶಗಳಿಗೂ ಒಂದು ಕಾಲಮಿತಿಯಲ್ಲಿ ಸ್ಮಶಾನ ಭೂಮಿಯನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ತಮ್ಮ  ಹಕ್ಕೊತ್ತಾಯಗಳನ್ನು ಸರ್ಕಾರ ಒಪ್ಪಿಕೊಂಡು ಈಗಲಾದರೂ ತಮಗೆ ಅಧಿಕಾರ ನೀಡಿದ ಪ್ರಜೆಗಳು ಆರ್ಥಿಕ ಸ್ವಾವಲಂಬನೆ ಗಳಿಸಿಕೊಳ್ಳಲು ಭೂಮಿ ಹಂಚಿಕೆ ಮಾಡಿ ತನ್ನ ಸಂವಿಧಾನ ಬದ್ಧ ಕರ್ತವ್ಯವನ್ನು ಪಾಲಿಸಬೇಕು ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಬಿಎಸ್ಪಿ ಉಪಾಧ್ಯಕ್ಷ ರಾಜು, ಜಿಲ್ಲಾ ಸಂಯೋಜಕ ದೇವರಾಜು, ಪ್ರಧಾನ ಕಾರ್ಯದರ್ಶಿ ಹರೀಶ್ ಅತ್ನಿ, ಖಜಾಂಚಿ ಶಿವಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement