ರಸ್ತೆಗಳ ಗುಂಡಿ ಮುಚ್ಚಿಸುವ ಭರವಸೆ
ಕ.ಪ್ರ.ವಾರ್ತೆ ಹಾಸನ ನ.28
ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವ ಖಮರುಲ್ ಇಸ್ಲಾಂ ಸದನದಲ್ಲಿ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ನಲ್ಲಿ ಸದಸ್ಯ ಪಟೇಲ್ ಶಿವರಾಂ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಗರದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನಗರೋತ್ಥಾನ ಮೊದಲನೇ ಹಂತದ ಯೋಜನೆ ರಾಜ್ಯದ ಹಣಕಾಸು ಆಯೋಗದ ಯೋಜನೆ, 13 ನೇ ಹಣಕಾಸು ಯೋಜನೆ ಮತ್ತು ನಗರೋತ್ಥಾನ ಎರಡನೇ ಹಂತದ ಯೋಜನೆಗಳ ಅಡಿಯಲ್ಲಿ ರಸ್ತೆಗಳ ಕಾಮಗಾರಿಗಳನ್ನು ನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಅಪೂರ್ಣಗೊಂಡ ಹಾಸನದ ರಿಂಗ್ ರಸ್ತೆಯನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಎಚ್.ಸಿ. ಮಹದೇವಪ್ಪ ತಿಳಿಸಿದರು.