ಸರ್ಕಾರ ವಜಾಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ
ಅರಸೀಕೆರೆ: ರಾಜ್ಯದಲ್ಲಿನ ಕಬ್ಬು ಬೆಳೆಗಾರರ ಸಂಕಷ್ಟಗಳಿಗೆ ಸ್ಪಂದಿಸದೆ ರೈತನ ಸಾವಿಗೆ ಕಾರಣವಾದ ಕಾಂಗ್ರೆಸ್ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕು ಎಂದು ರೈತ ಸಂಘದ ನೇತೃತ್ವದಲ್ಲಿ ನಾನಾ ಸಂಘಟನೆಗಳು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದವು.
ಇದೇ ಸಂದರ್ಭದಲ್ಲಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಎಂಇಎಸ್ ಶಾಸಕರ ವಿರುದ್ಧ ಕ್ರಿಮಿನಲ್ ಮೊಕ್ಕದಮೆ ದಾಖಲಿಸಬೇಕೆಂದು ಆಗ್ರಹಿಸಲಾಯಿತು. ರೈತ ಸಂಘದ ನೇತೃತ್ವದಲ್ಲಿ ಕರವೇ, ಬಿಜೆಪಿ, ಕೆಜೆಪಿ ಹಾಗೂ ನಾನಾ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ತಾಲೂಕು ರೈತ ಸಂಘದ ಕಾರ್ಯದರ್ಶಿ ಅಣ್ಣಾಯ್ಕನಹಳ್ಳಿ ಶಿವಮೂರ್ತಿ ಮಾತನಾಡಿ, ಕರವೇ ತಾಲೂಕು ಅಧ್ಯಕ್ಷ ಹೇಮಂತ್ಕುಮಾರ್, ಬಿಜೆಪಿ ವಕ್ತಾರ ಎನ್.ಡಿ. ಪ್ರಸಾದ್ ಮಾತನಾಡಿದರು. ಪ್ರತಿಭಟನಾಕಾರರು ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟು ಪಟ್ಟಣದ ಪಿ.ಪಿ. ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು. ತಹಸೀಲ್ದಾರ್ ಕೇಶವಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲೂಕು ಹಸೀರು ಸೇನೆ ಅಧ್ಯಕ್ಷ ನಿಂಗಪ್ಪ, ಮಾಗೇನಹಳ್ಳಿ ಶಿವಕುಮಾರ್, ಮಲ್ಲಿಕಾರ್ಜುನಪ್ಪ, ಎನ್.ಡಿ. ಪ್ರಸಾದ್, ಕಲ್ಗುಂಡಿ ಹಿರಿಯಣ್ಣ, ಕಿರಣ್ಕುಮಾರ್, ಕೃಷ್ಣಮೂರ್ತಿ ಡೋಲಾ, ರಘು, ರಮೇಶ ಭಾಗವಹಿಸಿದ್ದರು.