ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸರ್ಕಾರದ ಅಣಕು ಶವಯಾತ್ರೆ, ಪ್ರತಿಕೃತಿ ದಹನ

Rashmi Kasaragodu
Updated On : 30 Nov 2013, 12:03 pm

ಅರಸೀಕೆರೆ: ರೈತರಿಗೆ ಸೂಕ್ತ ನ್ಯಾಯ ಒದಗಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮತ್ತು ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ರೈತ ವಿಠಲ್ ಅರಬಾವಿ  ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಬೇಕು. ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ ನಡೆಸಿದರು.
ಇದೇ ವೇಳೆ ತಹಸೀಲ್ದಾರ್ ಕೇಶವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು. ಸರ್ಕಾರದ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸದೆ ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ನಿಂತು ನಿರ್ಲಕ್ಷ್ಯಿಸಿದ್ದೇ ಈ ಘಟನೆಗೆ ಕಾರಣ ಎಂದು ದೂರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ವಿವೇಕಾನಂದ ಸ್ವಾಮಿ, ಶಾಂತಪ್ಪಗೌಡ ಇನ್ನಿತರರು ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ನಿರ್ಧಾರದಿಂದಾಗಿ ರೈತನೊಬ್ಬ ಪ್ರಾಣ ಕಳೆದುಕೊಳ್ಳುವಂತಾಗಿದೆ. ರೈತರ ಬದುಕಿನೊಂದಿಗೆ ಚೆಲ್ಲಾಟ ನಡೆಸುತ್ತಿರುವ ಸರ್ಕಾರ ಕೂಡಲೇ ಮೃತನ ಕುಟುಂಬಕ್ಕೆ ನೆರವಾಗಬೇಕೆಂದು ಆಗ್ರಹಿಸಿದರಲ್ಲದೆ ಪ್ರತಿ ಟನ್ ಕಬ್ಬು ಬೆಳೆಯಲು 4200 ವೆಚ್ಚ ತಗಲುತ್ತಿದೆ. ಆದರೆ ಸರ್ಕಾರದ 2500 ಏನೇನು ಸಾಲದಾಗಿದೆ. ಬೆಂಬಲ ಬೆಲೆಯನ್ನು 3500 ನಿಗದಿಪಡಿಸಬೇಕೆಂದು ಒತ್ತಾಯಿಸಿದರು.
ಹೆಗಲ ಮೇಲೆ ಹಸಿರು ಟವೆಲ್ ಧರಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ಈವರೆಗೆ ಸೂಟ್ಕೇಸ್ ರಾಜಕೀಯವನ್ನು ನಡೆಸಿದ್ದಾರೆಯೇ ವಿನಃ ನಿಜವಾದ ರೈತ ಪರ ಕಾಳಜಿ ಹೊಂದಿಲ್ಲ. ಇಂತಹ ವ್ಯಕ್ತಿಗಳಿಂದ ರೈತ ಸಮುದಾಯಕ್ಕೆ ನ್ಯಾಯ ದೊರೆಯಲು ಸಾಧ್ಯವಿಲ್ಲ. ರೈತರು ಒಗ್ಗಟ್ಟಿನ ಹೋರಾಟ ನಡೆಸಬೇಕಿದೆ ಎಂದು ಮನವಿ ಮಾಡಿದರು.
ಮುಖಂಡರಾದ ಯತೀಶ್, ಮಂಜುನಾಥಗೌಡ, ಜಯಣ್ಣ, ಇನ್ನಿತರ ರೈತ ಮುಖಂಡರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement