ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

4 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Rashmi Kasaragodu
Updated On : 2 Oct 2013, 1:36 am

ಹಾಸನ: ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಅ.4 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ಸದಸ್ಯ ನಾಗರಾಜಶೆಟ್ಟಿ ತಿಳಿಸಿದರು. ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಜಿಲ್ಲಾಧಿಕಾರಿ ಅನ್ಬುಕುಮಾರ್ ಉದ್ಘಾಟಿಸಲಿದ್ದಾರೆ. ಶಾಸಕ ಎಚ್.ಎಸ್.ಪ್ರಕಾಶ್, ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣ, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಯು.ಪಿ.ಸಿಂಗ್, ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾ ಇತರರು ಭಾಗವಹಿಸಲಿದ್ದಾರೆ.
 ಪ್ರತಿಷ್ಠಾನವು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯ ಹತ್ತನೇ ಸಂಭ್ರಮವನ್ನು ಆಳ್ವಾಸ್ವಿಶ್ವ ನುಡಿಸಿರಿ ವಿರಾಸತ್ ಎಂಬ ಹೆಸರಿನಲ್ಲಿ ವಿಶ್ವ ಸಮ್ಮೇಳನವನ್ನು ಡಿ.19 ರಿಂದ 4 ದಿನಗಳು ನಡೆಯಲಿದೆ ಎಂದ ಅವರು, ಈಗಾಗಲೇ ದುಬೈ, ಅಬುದಾಭಿ, ಬೆಹರೈನ್ ಸೇರಿದಂತೆ ರಾಜ್ಯದ 40 ಕೇಂದ್ರಗಳಲ್ಲಿ ಘಟಕವನ್ನು ಆರಂಭಿಸಲಾಗಿದೆ ಎಂದರು. 4ರಂದು ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿಧರು ಭಾಗವಹಿಸಲಿದ್ದಾರೆ ಎಂದರು. ಸದಸ್ಯರಾದ ಯತಿರಾಜ್, ಸಂದೇಶ್, ಹಾಸನ ಘಟಕ ಕಾರ್ಯದರ್ಶಿ ಜಾವಗಲ್ ಪ್ರಸನ್ನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement