ಅಸಂಘಟಿತ ಕಾರ್ಮಿಕರ ನೋಂದಣಿಗೆ ಸಲಹೆ
ಅರಕಲಗೂಡು: ಅಸಂಘಟಿತ ಕಾರ್ಮಿಕರಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಬಹು ಸಂಖ್ಯೆಯಲ್ಲಿದ್ದು ಪ್ರತಿಯೊಬ್ಬರು ನೋಂದಣಿ ಮಾಡಿಸಿಕೊಂಡು ಸರ್ಕಾರ ಹಾಗೂ ಮಂಡಳಿಯಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳುವಂತೆ ಐಟಿಐ.ಕಾಲೇಜು ಪ್ರಾಂಶುಪಾಲ ಎಚ್.ಟಿ. ಗುರುರಾಜ್ ಸಲಹೆ ನೀಡಿದರು.
ಇಲ್ಲಿಯ ಬಸವೇಶ್ವರ ವೃತ್ತದಲ್ಲಿರುವ ಪಟ್ಟಾಭಿರಾಮ ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ನಡೆದ ಹಾಸನ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹೊಳೆನರಸೀಪುರ ಕಟ್ಟಡ ಕಾರ್ಮಿಕರಿಗೆ ಗುರುತಿನ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಸನ ಕಾರ್ಮಿಕ ಕಟ್ಟಡ ಸಂಘದ ಖಜಾಂಚಿ ಜಯರಾಮ ಅಧ್ಯಕ್ಷತೆ ವಹಿಸಿದ್ದು, ಕಾರ್ಮಿಕ ವಲಯದಲ್ಲಿ ಅಸಂಘಟಿತ ಕಾರ್ಮಿಕರ ಸಂಖ್ಯೆ ಶೇಕಡಾ 63 ರಷ್ಟು ಇದ್ದು ಈ ಕಾರ್ಮಿಕರಿಗೆ ಯಾವುದೇ ಆರ್ಥಿಕ ಸಾಮಾಜಿಕ ಭದ್ರತೆಗಳಿಲ್ಲದೇ ಶೋಷಣೆಗೆ ಒಳಗಾಗಿದ್ದಾರೆ. ಅಭಿವೃದ್ಧಿಗೆ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಾರಿಗೆ ತಂದಿರುವ ಸವಲತ್ತುಗಳನ್ನು ಮಂಡಳಿಯ ಮುಖಾಂತರ ಸಂಘಟನೆ ಅಗಬೇಕಾಗಿದೆ ಎಂದರು.