ಕೆರೆಗಳ ಪುನಶ್ಚೇತನ ಕಾರ್ಯಕ್ರಮ ಇಂದು
ಅರಸೀಕೆರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಗಳ ಪುನಶ್ಚೇತನ ಕಾರ್ಯಕ್ರಮ ಹಾಗೂ ಸಮಗ್ರ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ 2 ರಂದು ಬುಧವಾರ ಹಬ್ಬನಘಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡೇನಹಳ್ಳಿ ಸಿದ್ದರಾಮೇಶ್ವರ ದೇವಸ್ಥಾನ ಪಕ್ಕದಲ್ಲಿರುವ ಅಣ್ಣೇಕೆರೆಯ ಅಂಗಳದಲ್ಲಿ 11.30ಕ್ಕೆ ನಡೆಯಲಿದೆ. ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾರ್ಯಕ್ರಮ ಉದ್ಘಾಟಿಸುವರು.
ಮಾಜಿ ಪ್ರಧಾನಿ ದೇವೇಗೌಡರ ಉಪಸ್ಥಿತಿಯಲ್ಲಿ ಹಬ್ಬನಘಟ್ಟ ಗ್ರಾಪಂ ಅಧ್ಯಕ್ಷೆ ಪ್ರೇಮ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬೇಲೂರು ಶಾಸಕ ವೈ.ಎನ್.ರುದ್ರೇಶಗೌಡ, ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ, ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ, ಜಿಪಂ ಸದಸ್ಯ ಕೃಷ್ಣಾನಾಯ್ಕ್, ಈಶ್ವರಹಳ್ಳಿ ಲಕ್ಷ್ಮಣ್, ಸಿ.ಎನ್.ರತ್ನ, ಹುಚ್ಚೇಗೌಡ, ಪಾರ್ವತಮ್ಮ, ಜ್ಯೋತಿ ಗಂಗಾಧರ್, ತಾಪಂ ಉಪಾಧ್ಯಕ್ಷ ವಸಂತ ಹೊನ್ನಪ್ಪ ಭಾಗವಹಿಸಲಿದ್ದಾರೆ.
ತಾಪಂ ಕಾರ್ಯನಿರ್ವಹಣಾಧಿಕಾರಿ ಟಿ.ಎನ್.ಮೂರ್ತಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶೇಖರಪ್ಪ ಪಾಲ್ಗೊಳ್ಳುವರು. ನಾನಾ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.