ನಗರದಲ್ಲಿ ರಕ್ತದಾನ ಜಾಥಾ: ಹಸಿರು ನಿಶಾನೆ ತೋರಿದ ಡಿಸಿ
ಕನ್ನಡಪ್ರಭ ವಾರ್ತೆ ಹಾಸನ ಅ.1
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಬಿಈಜಿ ಪ್ರಥಮ ದರ್ಜೆ ಕಾಲೇಜು ರಕ್ತ ನಿಧಿ ಕೇಂದ್ರಗಳ ಆಶ್ರಯದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ಯಾಮಲಾದೇವಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೆ.ಶಂಕರ್, ಡಾ.ಹೇಮಲತಾ, ಡಾ.ರಾಜಗೋಪಾಲ್, ಡಾ.ಮಲ್ಲಿಕಾರ್ಜುನಸ್ವಾಮಿ, ಬಿಈಜಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಈ. ಜಗದೀಶ್ ಮುಂತಾದವರು ಜಾಥಾದಲ್ಲಿ ಭಾಗವಹಿಸಿದ್ದರು.