ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಣೆ: ಶಾಸಕ ಪ್ರಕಾಶ್
ಕನ್ನಡಪ್ರಭ ವಾರ್ತೆ ಹಾಸನ ಅ.1
ನಗರದ ರಂಗೋಲಿಹಳ್ಳದಲ್ಲಿ ವಿವೇಕಾನಂದ ಯುವಕ ಸಂಘದಿಂದ 37ನೇ ವರ್ಷದ ಗೌರಿ ಗಣೇಶ ಮಹೋತ್ಸವದ ಅಂಗವಾಗಿ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶಾಸಕ ಎಚ್.ಎಸ್. ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಿ , ಯುವಕರು ಶಾಂತಿ, ಸೌಹಾರ್ದತೆ ಮೂಲಕ ಹಬ್ಬ ಹರಿದಿನ ಆಚರಿಸಿಕೊಂಡು ಬರುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪತ್ರಕರ್ತ ಬಿ.ಆರ್. ಉದಯಕುಮಾರ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನಾನಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಎಸ್ಪಿ ರವಿ ಡಿ. ಚನ್ನಣ್ಣನವರ್, ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾಆನಂದ್, ಕುಮಾರ್, ಗಣೇಶ್ ಇದ್ದರು.