ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಾರಿಗೆ ಬಸ್ ತಡೆದು ಕದಾಳು ಗ್ರಾಮಸ್ಥರ ಪ್ರತಿಭಟನೆ

Rashmi Kasaragodu
Updated On : 3 Oct 2013, 12:22 pm

ಕ.ಪ್ರ.ವಾರ್ತೆ    ಆಲೂರು    ಅ.2
ತಾಲೂಕಿನ ಕದಾಳು ಗ್ರಾಮದಲ್ಲಿ ಸಾರಿಗೆ ಬಸ್ ಸರಿಯಾಗಿ ಬರುತ್ತಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಬುಧವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು. ಗ್ರಾಮಕ್ಕೆ ಈ ಮೊದಲು ಬಸ್ ಸಂಚಾರ ವ್ಯವಸ್ಥಿತವಾಗಿತ್ತು. ಆದರೆ ಕಳೆದ ಕೆಲವು ತಿಂಗಳುಗಳಿಂದ ಬಸ್ ಸರಿಯಾಗಿ ಬಾರದ ಕಾರಣ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು. ಸ್ಥಳಕ್ಕೆ ಅಧಿಕಾರಿಗಳು ಬಂದು ಬಸ್ ವ್ಯವಸ್ಥೆ ಸರಿಪಡಿಸುವವರೆಗೂ  ಇಲ್ಲಿಂದ ಕದಲುವುದಿಲ್ಲವೆಂದು ಪಟ್ಟು ಹಿಡಿದು ಕುಳಿತು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ನಂತರ ಸ್ಥಳಕ್ಕೆ ಆಗಮಿಸಿದ ಶಾಸಕ ಕುಮಾರಸ್ವಾಮಿ ಗ್ರಾಮಸ್ಥರ ಮನವೊಲಿಸಿ ದೂರವಾಣಿ ಮೂಲಕ ಕೆಎಸ್ಆರ್ಟಿಸಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಜತೆ ಮಾತನಾಡಿ, ಎರಡು ದಿನದಲ್ಲಿ ಗ್ರಾಮಕ್ಕೆ ಮೊದಲಿನಂತೆ ಬಸ್ ಸಂಚಾರ ಕಲ್ಪಿಸುವಂತೆ ಸೂಚಿಸಿದರು. ಈ ಹಿನ್ನೆಲೆಯಲ್ಲಿ ನಂತರ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement