ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹೈಟೆಕ್ ಆಸ್ಪತ್ರೆಗೆ ರು. 19 ಕೋಟಿ ಬಿಡುಗಡೆ ಮಾಡಿ

Rashmi Kasaragodu
Updated On : 3 Oct 2013, 12:25 pm

ಕನ್ನಡಪ್ರಭ ವಾರ್ತೆ೤ ಹಾಸನ೤ ಅ. 2
ಶಾಸಕ ಎಚ್.ಎಸ್.ಪ್ರಕಾಶ್ ಬುಧವಾರ ಹಾಸನ ವೈದ್ಯಕೀಯ ಕಾಲೇಜು ಮತ್ತು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕುಂದುಕೊರತೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅ.8 ರಂದು ಹಾಸನ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
  ಈ ಸಂದರ್ಭದಲ್ಲಿ ಅವರಿಗೆ ಜಿಲ್ಲೆಯ ಪ್ರಮುಖ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಗುವುದು.ಈ ಹಿನ್ನೆಲೆಯಲ್ಲಿ ತಾವು  ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ಭೇಟಿ ನೀಡಿ ನೂತನ ಆಸ್ಪತ್ರೆ ಕಾರ್ಯಾರಂಭಕ್ಕೆ ಇರುವ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸುವುದಾಗಿ ತಿಳಿಸಿದರು.
  ಹೊಸದಾಗಿ ನಿರ್ಮಿತ ಸುಸಜ್ಜಿತ ಆಸ್ಪತ್ರೆ ಕಟ್ಟಡದಲ್ಲಿ ಚಿಕಿತ್ಸಾ  ಘಟಕ ಪ್ರಾರಂಭವಾಗಬೇಕಾದರೆ ತುರ್ತಾಗಿ 19 ಕೋಟಿ ರು. ಅಗತ್ಯವಿದೆ.
  ಅಲ್ಲದೆ ಸಂಪೂರ್ಣವಾಗಿ ವ್ಯವಸ್ಥೆಗಳನ್ನು ಮಾಡಲು 40 ಕೋಟಿ ರು. ಅಗತ್ಯವಾಗಿದೆ. ಇದನ್ನು ಶೀಘ್ರವಾಗಿ ಒದಗಿಸಿ ಉತ್ತಮ ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.
  ಇದರಿಂದಾಗಿ ವೈದ್ಯಕೀಯ ಸ್ನಾತಕೋತ್ತರ ಪದವಿ ಅಧ್ಯಯನಕ್ಕೂ ಅವಕಾಶವಾಗಲಿದೆ. ಈ ಮೂಲಕ ಅನೇಕ  ಎಂಬಿಬಿಎಸ್ ವೈದ್ಯರ ಸೇವೆಯು ಉಚಿತವಾಗಿ ಆಸ್ಪತ್ರೆಗೆ ಲಭ್ಯವಾಗಲಿದೆ. ಅಲ್ಲದೆ ಹಾಸನ ಜಿಲ್ಲಾ ಆಸ್ಪತ್ರೆಗೆ ಆಗಮಿಸುವ ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ಸಾವಿರಾರು ಮಂದಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.  ಸರ್ಕಾರ ಹೊಸ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸುತ್ತಿರುವುದು ಸ್ವಾಗತಾರ್ಹ. ಆದರೆ ಈಗಾಗಲೇ ತೆರೆಯಲಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸಂಪೂರ್ಣ ಅನುದಾನ ಬಿಡುಗಡೆ ಮಾಡಿ ಸುಸಜ್ಜಿತಗೊಳಿಸಲು ಸಹಕರಿಸಬೇಕೆಂಬುದು ತಮ್ಮ ಅಭಿಪ್ರಾಯ. ಈ  ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ನುಡಿದರು. ನಿರ್ದೇಶಕ ಡಾ.ರಾಚೇಗೌಡ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement