ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಹೊಳೆನರಸೀಪುರ: 2012-13 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ತಾಲೂಕಿನ ಸರ್ಕಾರಿ ನೌಕರರ ಮಕ್ಕಳು ಅಂಕಪಟ್ಟಿಗಳನ್ನು ಅ. 4ರೊಳಗೆ ತಾಲೂಕು ಸಂಘಕ್ಕೆ ನೀಡುವಂತೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕುಮಾರಸ್ವಾಮಿ ಕೋರಿದ್ದಾರೆ. ಅಂಕಪಟ್ಟಿಯನ್ನು ಟಿ.ಎಸ್.ಕುಮಾರಸ್ವಾಮಿ, ಅಧ್ಯಕ್ಷ ಸರ್ಕಾರಿ ನೌಕರರ ಸಂಘ, ಬಾಲಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ತಲುಪಿಸುವಂತೆ ಹಾಗೂ ಹೆಚ್ಚಿನ ವಿವರಗಳಿಗೆ ದೂ 90089 39065 ಮೂಲಕ ಪಡೆಯುವಂತೆ ಮನವಿ ಮಾಡಿದ್ದಾರೆ.