ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಇಂದು - ನಾಳೆ ನಾನಾ ಗ್ರಾಮಗಳಲ್ಲಿ ಕಾನೂನು ಸಾಕ್ಷರತಾ ರಥಯಾತ್ರೆ

Rashmi Kasaragodu
Updated On : 8 Oct 2013, 12:36 pm

ಅರಸೀಕೆರೆ: ಸಂವಿಧಾನ ಬದ್ದವಾಗಿ ಮಹಿಳೆಯರು ಮತ್ತು ಮಕ್ಕಳಿಗಿರುವ ಕಾನೂನುಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಲು ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಕಾನೂನು ಸಾಕ್ಷರತಾ ರಥ ಯಾತ್ರೆಯನ್ನು  ನಡೆಸಲಾಗುತ್ತಿದೆ ಎಂದು ಜೆಎಂಎಫ್ಸಿ ಹಿರಿಯ ನ್ಯಾಯಾಧೀಶೆ  ಸರಸ್ವತಿ ವಿ.ಕೋಸಂದರ್ ತಿಳಿಸಿದರು. ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಹಾಗೂ ತಾಲೂಕಿನ ನಾನಾ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ತಾಲೂಕಿನಲ್ಲಿ ನಡೆಸಲಾಗುತ್ತಿರುವ ಕಾನೂನು ಸಾಕ್ಷರತಾ ರಥಯಾತ್ರೆಯ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿದ ಅವರು, ಅ. 8 ರಂದು ಬೆಳಗ್ಗೆ ಕೋಳಗುಂದ,  ನೇರ್ಲೆಗೆ ಹಾಗೂ ಜಾವಗಲ್ ಗ್ರಾಮದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಅ.9 ರಂದು ಬುಧವಾರ ಬೆಳಿಗ್ಗೆ ಜಾಜೂರು ಮತ್ತು ಹಿರಿಯೂರು ಗ್ರಾಮದಲ್ಲಿ ಕಾನೂನು ಅರಿವು ಕಾರ್ಯಕ್ರಮಗಳು ನಡೆದ ನಂತರ ಮಧ್ಯಾಹ್ನ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಜನತಾ ನ್ಯಾಯಾಲಯವನ್ನು ನಡೆಸಲಾಗುತ್ತದೆ ಎಂದು ಹೇಳಿದರು.
 ಪ್ರಧಾನ ನ್ಯಾಯಾಧೀಶ ದೇವಾನಂದ ಮತ್ತು ನ್ಯಾ. ಪ್ರಕಾಶ್ ಚನ್ನಪ್ಪ ಕುರುಬೆಟ್, ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಸರ್ವೇಶ್, ತಾಪಂ ಕಾರ್ಯ ನಿರ್ವಹಣಾಧಿಕಾರಿ   ಟಿ.ಎನ್.ಮೂರ್ತಿ,  ವಕೀಲರಾದ ವಿಜಯಕುಮಾರ್, ಅಶೋಕ್ಕುಮಾರ್, ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement