ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

24 ರಿಂದ ನ.5 ರವರೆಗೆ ಹಾಸನಾಂಬೆ ದರ್ಶನ

Rashmi Kasaragodu
Updated On : 10 Oct 2013, 11:20 am

ಹಾಸನ: ಹಾಸನಾಂಬ ದೇವಸ್ಥಾನದ ಬಾಗಿಲನ್ನು ಅಕ್ಟೋಬರ್ 24 ರಂದು ತೆರೆದು ನವೆಂಬರ್ 5ರಂದು ಮುಚ್ಚಲಾಗುವುದು. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸುಗಮ ದರ್ಶನಕ್ಕಾಗಿ ಅವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಕ್ತರಿಗೆ ವಾಹನ ನಿಲುಗಡೆಗೆ ಜಾತ್ರೆ ಮೈದಾನದಲ್ಲಿ ವ್ಯವಸ್ಥೆ ಮಾಡಲು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ನಗರಸಭೆ ಆಯುಕ್ತರಿಗೆ ಸೂಚಿಸಿದರು.
ಭಕ್ತರಿಗೆ ದೇವರ ದರ್ಶನಕ್ಕೆ ವಿಶೇಷ ಪಾಸ್ ಒದಗಿಸಲು ಹಾಗೂ ಲಡ್ಡು ಪ್ರಸಾದ ನೀಡಲು ಮತ್ತು ದೇವರ ದರ್ಶನಕ್ಕೆ ಬರುವ ಎಲ್ಲಾ ಭಕ್ತರಿಗೆ ಪುಳಿಯೋಗರೆ ಅಥವಾ ಪೊಂಗಲ್ ಪ್ರಸಾದ ನೀಡಲು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರಲ್ಲದೆ, ಪ್ರತಿನಿತ್ಯ ಸಂಜೆ ದೇವಸ್ಥಾನದ ಬಳಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತೆ ತಿಳಿಸಿದರು.
ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ದೇವಸ್ಥಾನದ ಬಗ್ಗೆ ಮಾಹಿತಿಯನ್ನು ಒಳಗೊಂಡ ಫ್ಲೆಕ್ಸ್ ಹಾಕುವಂತೆ ತಿಳಿಸಿದರಲ್ಲದೆ, ದೀಪಾಲಂಕಾರ ಮಾಡಿಸಲು ಕ್ರಮ ವಹಿಸಲು ಹೇಳಿದರು.
ಶಾಸಕ ಎಚ್.ಎಸ್.ಪ್ರಕಾಶ್ ಮಾತನಾಡಿ, ಹೊರ ಜಿಲ್ಲೆಗಳಿಂದ ಬರುವ ಭಕ್ತರಿಗೆ ಪಾಸ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರಲ್ಲದೆ ನೂಕುನುಗ್ಗಲಿಗೆ ಅವಕಾಶ ಕೊಡದೆ ಶಾಂತ ರೀತಿಯಲ್ಲಿ ದರ್ಶನ ಪಡೆಯಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ಉಪ ವಿಭಾಗಾಧಿಕಾರಿ ಬಿ.ಶರತ್, ಅಧಿಕಾರಿ ರಾಮಚಂದ್ರ, ನಗರಸಭೆ ಆಯುಕ್ತ ನಾಗಭೂಷಣ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕೃಷ್ಣಮೂರ್ತಿ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement