ಚ.ರಾ.ಪಟ್ಟಣದಲ್ಲಿಂದು ಸಂವಾದ ಕಾರ್ಯಕ್ರಮ
ಹಾಸನ: ಜಯಪ್ರಕಾಶ್ ನಾರಾಯಣ್ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಜಿಲ್ಲಾ ಆರಕ್ಷಕ ಇಲಾಖೆ ಸಹಯೋಗದೊಂದಿಗೆ ಚನ್ನರಾಯಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ಕುವೆಂಪು ವೇದಿಕೆಯಲ್ಲಿ ಅ. 11ರಂದು ಬೆಳಗ್ಗೆ 10ಕ್ಕೆ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಯುವ ಸಮೂಹ ಮತ್ತು ಆರಕ್ಷಕ ಇಲಾಖೆಯ ಪಾತ್ರ ಕುರಿತು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಂಭುನಾಥಸ್ವಾಮೀಜಿ ಸಾನಿಧ್ಯ ವಹಿಸುವರು. ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಚನ್ನರಾಯಪಟ್ಟಣ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶ ಎಸ್.ಟಿ.ದೇವರಾಜು, ತಹಸೀಲ್ದಾರ್ ಡಾ.ನಾಗರಾಜ್, ಆದಿಚುಂಚನಗಿರಿ ಶಿಕ್ಷಣ ಸಮೂಹ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ಜಯರಾಂ ಭಾಗವಹಿಸಲಿದ್ದಾರೆ.
ಹಾಸನ ಜಿಲ್ಲೆಯ ಎಲ್ಲಾ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದ್ದು, ಪ್ರತಿ ಕಾಲೇಜಿನ ಆಯ್ದ ಇಬ್ಬರು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಕಾರ್ಯದರ್ಶಿ ಜಿ.ಬಿ.ಶಿವರಾಜು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಅತಿಥಿಗಳಾಗಿ ಸ್ಥಳೀಯ ಶಾಸಕ ಸಿ.ಎನ್.ಬಾಲಕೃಷ್ಣ, ಸಂಸ್ಥೆಯ ಅಧ್ಯಕ್ಷ ಡಿ.ಎಸ್.ಬಸವರಾಜು, ಎಚ್.ಎಸ್.ವಿಜಯ್ಕುಮಾರ್, ಹೊಳೆನರಸಿಪುರ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ವೃತ್ತ ನಿರೀಕ್ಷಕ ಶೈಲೇಂದ್ರ ಕುಮಾರ್, ಪ್ರಾಂಶುಪಾಲ ಎನ್.ಸೋಮಸುಂದರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಕೆ.ಉಮಾನಾಥ್ ಇತರರು ಪಾಲ್ಗೊಳ್ಳುವರು.