ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶ ಇಂದು

Rashmi Kasaragodu
Updated On : 10 Oct 2013, 11:21 am

ಅರಸೀಕೆರೆ: ತಾಲೂಕಿನಲ್ಲಿ ಬಿಜೆಪಿ ಸದೃಢವಾಗಿ ಸಂಘಟಿಸುವ ಸಲುವಾಗಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಅ.11 ರಂದು ಪಟ್ಟಣದಲ್ಲಿ ನಡೆಸಲಾಗುತ್ತಿದೆ ಎಂದು ಬಿಜೆಪಿ ತಾಲೂಕು ವಕ್ತಾರ ವೈ.ಕೆ.ದೇವರಾಜು   ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
 ಮುಂದಿನ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು. ಪಟ್ಟಣದ ಶಾಂತವೀರಮ್ಮ ಪರಮೇಶ್ವರಪ್ಪ ಕಲ್ಯಾಣ ಮಂಟಪದಲ್ಲಿ ಅ.11 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕಾರ್ಯಕರ್ತರ ಸಮಾವೇಶವನ್ನು ತಾಲೂಕು ಬಿಜೆಪಿ ಅಧ್ಯಕ್ಷ ಎಚ್.ಎಸ್.ರಮೇಶ್ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದು, ಸಮಾವೇಶವನ್ನು ಜಿಲ್ಲಾಧ್ಯಕ್ಷ ರೇಣುಕುಮಾರ್ ಉದ್ಘಾಟಿಸುವರು ಎಂದರು.
  ವಿಶೇಷ ಆಹ್ವಾನಿತರಾಗಿ ರಾಜ್ಯ ಮುಖಂಡ ಅಶ್ವಥ್ನಾರಾಯಣ್, ಪ್ರಾಣೇಶ್ ಆಗಮಿಸವರು ಎಂದು ಹೇಳಿದರು.  ಬಿಜೆಪಿ ನಗರಾಧ್ಯಕ್ಷ ಕೆ.ವಿ.ಹಿರಿಯಣ್ಣಯ್ಯ ಮಾತನಾಡಿದರು. ಬೋರನಕೊಪ್ಪಲು ಬಿ.ಎಲ್.ರವಿಕುಮಾರ್, ಜಿ.ವಿ.ಟಿ. ಬಸವರಾಜು, ಮನೋಜ್ಕುಮಾರ್ ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement