ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

Srinivasa Murthy VN
Updated On : 18 Oct 2013, 12:45 pm

ಹಾಸನ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 6ನೇ ಸಮ್ಮೇಳನ ಬೆಂಗಳೂರಿನ ಕ್ರೈಸ್ಟ್ ವಿವಿ ಸಹಯೋಗದೊಂದಿಗೆ ಎರಡು ದಿನಗಳ ಕಾಲ 2013ರ ಡಿಸೆಂಬರ್ 20 ಮತ್ತು 21 ನಡೆಯಲಿದೆ.
ಅವಿಷ್ಕಾರಕ ಸಂಶೋಧನೆ ಮತ್ತು ಅಭಿವೃದ್ಧಿ ಉತ್ತೇಜನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ (Science and Technology for promoting innovative research and development) ಎಂಬ ಕೇಂದ್ರ ವಿಷಯದಡಿ ಆಯೋಜಿಸಲಾಗುವುದು.
ಸಮ್ಮೇಳನಕ್ಕೆ ರಾಜ್ಯದ ನಾನಾ ಇಲಾಖೆಗಳ ಅಧಿಕಾರಿಗಳು, ವಿಶ್ವವಿದ್ಯಾನಿಲಯಗಳ  ಸ್ನಾತಕೋತ್ತರ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು, ವಿಜ್ಞಾನಿಗಳು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದು. ಮೂಲ ಮತ್ತು ಅನ್ವಯಿಕ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಕೆಗಳನ್ನು ಸಹ  (www.chrisrtuniversity.in) ಮಂಡಿಸಬಹುದಾಗಿದೆ.
ಪ್ರತಿನಿಧಿಗಳಾಗಿ ನೊಂದಾಯಿಸಿಕೊಳ್ಳಲು ಹಾಗೂ ಪ್ರಾತ್ಯಕ್ಷಿಕೆಗಳನ್ನು ಕಳುಹಿಸಲು ನವೆಂಬರ್ 30  ಕಡೇ ದಿನ.  ತಜ್ಞ ಸಮಿತಿ ಆಯ್ಕೆ ಮಾಡಿದ ಅತ್ಯುತ್ತಮವಾದ 3 ಪ್ರಾತ್ಯಕ್ಷಿಕೆಗಳಿಗೆ ಬಹುಮಾನ ನೀಡಲಾಗುವುದು. ಹೆಚ್ಚಿನ ವಿವರ ಕ್ರೈಸ್ಟ್ ವಿವಿ ವೆಬ್‌ತಾಣದಿಂದ (ಢಿಢಿಢಿ.ಝಛ್ಠ್ಝಡ್ಠಡ್ಡಿಟ್ಝಿಢಜ್ಠಡ್ಝಡಿಣ.್ಝಟಿ)  ಪಡೆಯಬಹುದಾಗಿದೆ.
 ಸಮ್ಮೇಳನಕ್ಕೆ ಪ್ರವೇಶ ಉಚಿತವಾಗಿದ್ದು ಮೊದಲು ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವಿಶೇಷ ನಿರ್ದೇಶಕ  ಡಾ.ಎಚ್.ಹೊನ್ನೇಗೌಡ ತಿಳಿಸಿದ್ದಾರೆ.

ನಗರದಲ್ಲಿ ಹಾಸನಾಂಬ ವಸ್ತ್ರ ವೈಭವ
ಹಾಸನ: ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯ್ತಿ, ಹಾಸನ ವತಿಯಿಂದ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20ರವರೆಗೆ 5 ದಿನ  ಕಾಲ ಹಾಸನಾಂಬ ವಸ್ತ್ರ ವೈಭವ ಎಂಬ ಜಿಲ್ಲಾ ಕೈಮಗ್ಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆರ್.ಸಿ. ರಸ್ತೆಯಲ್ಲಿರುವ ಸ್ಲೇಟರ್‌ಹಾಲ್‌ನಲ್ಲಿ   ಆಯೋಜಿಸಲಾಗಿದೆ. ಈ ಮೇಳದಲ್ಲಿ ಕಾಟನ್ ಸೀರೆಗಳು, ರೇಷ್ಮೆ ಸೀರೆಗಳು ಹಾಗೂ ಇನ್ನಿತರ ವಸ್ತ್ರಗಳನ್ನು ಖರೀದಿಸಬಹುದು. ಸಾರ್ವಜನಿಕರು ಈ ಅವಕಾಶ ಉಪಯೋಗಿಸಿಕೊಳ್ಳುವಂತೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement