ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಮಸ್ಯೆ ನಿವಾರಣೆಗೆ ಅಧಿಕಾರಿಗಳ ಜತೆ ಚರ್ಚೆ: ದೇವೇಗೌಡ

Vishwanath S
Updated On : 25 Oct 2013, 1:24 am

ಕ.ಪ್ರ.ವಾರ್ತೆ ,  ಚನ್ನರಾಯಪಟ್ಟಣ ,  ಅ.24
ತಾಲೂಕಿನಲ್ಲಿ ಜ್ವಲಂತ ಸಮಸ್ಯೆಗಳಿದ್ದು, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಾವು ಮುಂದಾಗಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದರು.
ತಾಲೂಕಿನ ಬೆಳಗೀಹಳ್ಳಿಯಲ್ಲಿ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ತಾಲೂಕಿನ ಕೆಲ ಭಾಗದಲ್ಲಿ ನೀರಾವರಿ ಸೌಲಭ್ಯವಿಲ್ಲದೆ ಜನತೆಗೆ ತೊಂದರೆಯಾಗಿದ್ದು, ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಪ್ರಸಕ್ತ ವರ್ಷ ಯಾವುದೋ ಸಮಯದಲ್ಲಿ ಮಳೆಯಾಗುತ್ತಿದೆ. ಆದರೆ ಕೆರೆ ತುಂಬಿಸುವ ಮಳೆಯಾಗದ ಕಾರಣ ರೈತರು ಬರಗಾಲವನ್ನು ತಡೆಯಲಾಗದೆ ಚಿಂತಾಕ್ರಾಂತನಾಗಿದ್ದಾನೆ ಎಂದು ತಿಳಿಸಿದರು.
ಹಿರೀಸಾವೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಕೂಡಲೇ ರೇಲ್ವೆ ಸಂಪರ್ಕ ಕಲ್ಪಿಸುವುದು ತಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ತಾಲೂಕಿನ ಸಮಸ್ಯೆಗಳ ಬಗ್ಗೆ ಪರಿಶೀಲನೆಗಾಗಿ ನ.10ರ ನಂತರ ತಾಲೂಕಿನಲ್ಲಿ ಪ್ರವಾಸ ಕೈಗೊಂಡು ಸಮಸ್ಯೆ ಬಗೆಹರಿಸಲು ಮುಂದಾಗಲಾಗುವುದು ಎಂದು ತಿಳಿಸಿದರು.
ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ ಹಿರೀಸಾವೆ ಹೋಬಳಿಗೆ ರಸ್ತೆ ಮತ್ತು ಏತ ನೀರಾವರಿ ಮುಖೇನ ಕೆರೆಗಳಿಗೆ ನೀರು ತುಂಬಿಸುವುದು ತಮ್ಮ ಮೂಲ ಉದ್ದೇಶವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರದ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನಕ್ಕೆ ತಮ್ಮ ಶಾಸಕ ನಿಧಿಯಿಂದ ಹಾಗೂ ಲೋಕಸಭಾ ಸದಸ್ಯರ ನಿಧಿಯಿಂದ 10 ಲಕ್ಷ ನೀಡುವ ಉದ್ದೇಶ ಹೊಂದಲಾಗಿದ್ದು, ಇದರ ಜತೆಗೆ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಬೆಳಗೀಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುರಿವ ಮಳೆಯ ನಡುವೆಯೂ ಅವರು ಪ್ರಸಿದ್ಧ ಕಂಬದ ನರಸಿಂಹಸ್ವಾಮಿ ದೇವರ ಹಿನ್ನೆಲೆಯನ್ನು ಗ್ರಾಮಸ್ಥರು ಹಾಗೂ ಅರ್ಚಕರಿಂದ ಪಡೆದು ದೇವರಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿದ ನಂತರ ನರಸಿಂಹಸ್ವಾಮಿ ಉತ್ಸವ ಮೂರ್ತಿಗೆ ನಮನ ಸಲ್ಲಿಸಿ ಅವರ ಮಹಿಮೆಯ ಬಗ್ಗೆ ಬಾಯಿ ಮೇಲೆ ಬೆರಳಿಟ್ಟುಕೊಂಡು ಚಿಂತಿಸಿ ನಂತರ ನಮಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ರಾಮಕೃಷ್ಣ, ತಾಲೂಕು ಜೆಡಿಎಸ್ ಅಧ್ಯಕ್ಷ ದೇವರಾಜೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಪುಟ್ಟಸ್ವಾಮಿ, ರಾಮಕೃಷ್ಣ, ಗಣೇಶ್ ಇದ್ದರು.

ತಾಲೂಕಿನ ಕೆಲ ಭಾಗದಲ್ಲಿ ನೀರಾವರಿ ಸೌಲಭ್ಯವಿಲ್ಲದೆ ಜನತೆಗೆ ತೊಂದರೆಯಾಗಿದ್ದು, ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಪ್ರಸಕ್ತ ವರ್ಷ ಯಾವುದೋ ಸಮಯದಲ್ಲಿ ಮಳೆಯಾಗುತ್ತಿದೆ. ಆದರೆ ಕೆರೆ ತುಂಬಿಸುವ ಮಳೆಯಾಗದ ಕಾರಣ ರೈತರು ಬರಗಾಲವನ್ನು ತಡೆಯಲಾಗದೆ ಚಿಂತಾಕ್ರಾಂತನಾಗಿದ್ದಾನೆ.
- ಎಚ್.ಡಿ. ದೇವೇಗೌಡ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement