ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹಾಸನಾಂಬೆ ದರ್ಶನ ಪಡೆದ ಮಾಜಿ ಪ್ರಧಾನಿ

Vishwanath S
Updated On : 28 Oct 2013, 12:09 pm

ಹಾಸನ: ಹಾಸನದ ಅಧಿ ದೇವತೆ ಹಾಸನಾಂಬೆಯ ದರ್ಶನ ಭಾನುವಾರ ನಾಲ್ಕನೇ ದಿನಕ್ಕೆ ಮುಂದುವರೆದಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇವಾಲಯಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು.
ವರ್ಷಕ್ಕೊಮ್ಮೆ ದರ್ಶನ ಭಾಗ್ಯ ನೀಡುವ ಹಾಸನಾಂಬೆಯ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ದೇವೇಗೌಡರು ದೇವಿಯ ದರ್ಶನ ಪಡೆದು ಪುನೀತರಾದರು. ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿಯ ದರ್ಶನ ಮಾಡಿ, ಹೋಮದಲ್ಲಿ ಭಾಗವಹಿಸಿದ್ದರು.
ನಂತರ ಮಾತನಾಡಿದ ಅವರು, ಹಾಸನಾಂಬೆಯ ಮೇಲೆ ಅಪಾರವಾದ ನಂಬಿಕೆಯನ್ನು ಹೊಂದಿರುವುದರಿಂದ ಪ್ರತಿವರ್ಷ ದೇವಾಲಯಕ್ಕೆ ಬಂದು ದೇವಿಯ ದರ್ಶನವನ್ನು ಮಾಡುತ್ತೇನೆ. ಅದೇ ರೀತಿಯ ಈ ವರ್ಷ ಕೂಡ ದೇವಿಯ ದರ್ಶನ ಮಾಡಿ, ದೇಶ ಹಾಗೂ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಅಂತ ಬೇಡಿಕೊಂಡೆ. ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸ್ಪಂಧಿಸುವಂತೆ ಅನುಗ್ರಹ ನೀಡಲಿ ಎಂದು ಪ್ರಾರ್ಥಿಸಿದೆ ಎಂದರು.
ಯೋಧನ ಕುಟುಂಬಕ್ಕೆ ಪರಿಹಾರ ಬಂದಿಲ್ಲ: ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಅಗ್ರಹಾರ ಗ್ರಾಮದ ಯೋಗಾನಂದ ಎಂಬ ಯೋಧ ಮೃತಪಟ್ಟಿದ್ದು, ಈ ಯೋಧ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾನೆ. ಆದರೆ ಆತನ ಕುಟುಂಬಕ್ಕೆ ಈವರೆಗೂ ಸರ್ಕಾರದಿಂದ ಪರಿಹಾರ ಲಭ್ಯವಾಗಿಲ್ಲ. ಕೂಡಲೇ ಆತನ ಕುಟುಂಬಕ್ಕೆ ಪರಿಹಾರ ನೀಡಬೇಕು. ಅತನ ಪತ್ನಿಗೆ ಉದ್ಯೋಗ ಕಲ್ಪಿಸಬೇಕು ಎಂದ ಅವರು, ಪಕ್ಷದ ವತಿಯಿಂದ ಲಕ್ಷ ರು.ಗಳನ್ನು ನೀಡುವುದಾಗಿ ಹೇಳಿದರು.
ಮಾಜಿ ಪ್ರಧಾನಿ ದೇವಾಲಯಕ್ಕೆ ಭೇಟ ನೀಡಿದ್ದ ಸಂದರ್ಭದಲ್ಲಿ ದೇವಿಯ ದರ್ಶನಕ್ಕಾಗಿ ಸಾಗರೋಪಾದಿಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಯಿತು. ಸಾವಿರಾರು ಭಕ್ತರು ದೇವಿಯ ದರ್ಶನ ಮಾಡಲು ಜಮಾಯಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement