ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಿಲ್ಲಾಧ್ಯಕ್ಷ ಸ್ಥಾನದಿಂದ ಮಲ್ಲೇಶ್ ವಜಾಕ್ಕೆ ಆಗ್ರಹ

Rashmi Kasaragodu
Updated On : 28 Oct 2013, 11:25 am

ಕ.ಪ್ರ.ವಾರ್ತೆ೤ ಹಾಸನ೤ ಅ. 28
ರಾಜಕೀಯ ನಿವೃತ್ತಿ ಘೋಷಿಸಿರುವ ಡಿ.ಮಲ್ಲೇಶ್ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಕೆಲವತ್ತಿ ಸೋಮಶೇಖರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಡಿ.ಮಲ್ಲೇಶ್ ಈಗಾಗಲೇ ರಾಜಕೀಯದಿಂದ ಸ್ವಯಂ ನಿವೃತ್ತಿಯನ್ನು ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ದಿನದಂದೇ ಘೋಷಣೆ ಮಾಡಿದ್ದಾರೆ. ಪರಿಶಿಷ್ಟ ಜಾತಿಯ ಪರವಾಗಿ ಅವರು ಸಕ್ರಿಯವಾಗಿ ಭಾಗವಹಿಸದೆ ಹಾಗೂ ಯಾವುದೇ ರೀತಿಯಲ್ಲಿ ದಲಿತ ಪರ ಸಮಸ್ಯೆಗಳಿಗೆ ಸ್ಪಂದಿಸದೆ ಮತ್ತು ಯಾವುದೇ ಕಾರ್ಯಕ್ರಮಗಳನ್ನು ರೂಪಿಸದೆ ನಿಷ್ಕ್ರಿಯವಾಗಿದ್ದಾರೆ. ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಅದರ ವಿರುದ್ಧ ಧ್ವನಿ ಎತ್ತದೆ ಕಳೆದ 2 ವರ್ಷಗಳಿಂದ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಈಗಾಗಲೇ ಇವರಿಗೆ ಕಾಂಗ್ರೆಸ್ ಮೂರು ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ್ದು, ಒಂದು ಬಾರಿ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಅವಕಾಶ ನೀಡಿತ್ತು. ಆದರೆ ಇವರನ್ನು ಜನತೆ ತಿರಸ್ಕರಿಸಿದ್ದಾರೆ. ಇವರು ದಲಿತ ಮತಗಳನ್ನು ಸೆಳೆಯುವಲ್ಲಿ ವಿಫಲರಾಗಿದ್ದಾರೆ. ನಿಯಮಾವಳಿ ಪ್ರಕಾರ ಪಕ್ಷದಲ್ಲಿ ಒಬ್ಬರಿಗೆ ಒಂದು ಹುದ್ದೆ ನಿಮಯ ಮೀರಿ ಇವರಿಗೆ ಕೆಪಿಸಿಸಿ ಸದಸ್ಯತ್ವ ಹಾಗೂ ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ ಎಂದು ದೂರಿದರು.
ಮುಂಬರುವ ಲೋಕಸಭಾ ಚುನಾವಣೆಗೆ ಇವರಿಂದ ಪಕ್ಷಕ್ಕೆ ಹಾನಿ ಉಂಟಾಗಲಿದ್ದು, ಪಕ್ಷದಲ್ಲಿ ನಿಷ್ಠಾವಂತ ದಲಿತ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ. ಇವರು ಪಕ್ಷದ ಆಂತರಿಕ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಸಮಿತಿಗಳನ್ನು ರಚಿಸಿದ್ದು, ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಡಿ.ಮಲ್ಲೇಶ್ರನ್ನು ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಕೆಪಿಸಿಸಿ ಸದಸ್ಯ ಷಣ್ಮುಖ, ಕುಮಾರಸ್ವಾಮಿ, ಅಶೋಕ್ ನಾಯಕರಹಳ್ಳಿ, ಕೃಷ್ಣಕುಮಾರ್, ರವಿಕುಮಾರ್ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement