ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ರಾಷ್ಟ್ರಧ್ವಜ, ರಾಷ್ಟ್ರಗೀತೆಗೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯ'

Rashmi Kasaragodu
Updated On : 29 Oct 2013, 11:19 am

ಕ.ಪ್ರ.ವಾರ್ತೆ   ಹಾಸನ   ಅ. 28
ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಗೌರವ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಸೇವಾದಳ ಕೇಂದ್ರ ಸಮಿತಿ ಸದಸ್ಯ ಕಮಲ್ಕುಮಾರ್ ಹೇಳಿದರು. ನಗರದ ಡಾ. ಅಂಬೇಡ್ಕರ್ ಭವನದಲ್ಲಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ವಿಚಾರವಾಗಿ ಹಮ್ಮಿಕೊಂಡಿದ್ದ ಒಂದು ದಿನದ ಶಿಬಿರದಲ್ಲಿ ಮಾತನಾಡಿದ ಅವರು, ಶಿಕ್ಷಕರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ದೇಶ ಪ್ರೇಮ ಬೆಳೆಸುವಂತೆ ಸಲಹೆ ನೀಡಿದ ಅವರು, ಯಾವ ಸಂದರ್ಭದಲ್ಲೂ ರಾಷ್ಟ್ರಧ್ವಜಕ್ಕೆ ಬಾರದಂತೆ ಶಿಕ್ಷಕರು ನಿರ್ವಹಣೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ  ಮಾತನಾಡಿ, ಸ್ವಾತಂತ್ರ್ಯ ಬಂದು 67 ವರ್ಷ ಕಳೆದಿದ್ದು, ಅಂದಿನ ದಿನಗಳಲ್ಲಿದ್ದ ದೇಶಪ್ರೇಮ ಇಂದು ಎಲ್ಲಿ ಹುಡುಕಿದರೂ ಸಿಗುವುದು ಕಷ್ಟವಾಗಿದೆ. ರಾಷ್ಟ್ರಭಕ್ತಿ ಕಣ್ಮರೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದರು.
ದೇಶ ಪ್ರೇಮ ಕುರಿತು ಯುವ ಶಕ್ತಿಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಸೇವಾದಳ ಕಾರ್ಯನಿರ್ವಹಿಸುತ್ತಿರುವುದಕ್ಕೆ ಶ್ಲಾಘಿಸಿದರು. ಸೇವಾದಳ ಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಪ್ರೇಮವನ್ನು ಬೆಳೆಸುವಲ್ಲಿ ಮುಖ್ಯ ಪಾತ್ರವಹಿಸುತ್ತಿದೆ ಎಂದು ಹೇಳಿದರು. ಮೊದಲಿಗೆ ಅಂಬೇಡ್ಕರ್ ಭವನದ ಆವರಣದಲ್ಲಿ ರಾಷ್ಟ್ರಧ್ವಜದ ಬಗ್ಗೆ ಮಾಹಿತಿ ನೀಡಿ ಧ್ವಜಾರೋಹಣ ನೆರವೇರಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುರುಷೋತ್ತಮ್, ಭಾರತ ಸೇವಾದಳದ ವಿ.ಎಸ್. ರಾಣಿ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲೋಕೇಶ್ಮೂರ್ತಿ, ಸೇವಾದಳ ಸಂಘಟಕ ಬಿ.ಎನ್. ಮಹೇಶ್, ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಯ ವಾರ್ಡನ್ಗಳು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement