ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಹಾಯವಾಣಿ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

Rashmi Kasaragodu
Updated On : 28 Oct 2013, 11:25 am

ಹಾಸನ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ವಯಂಸೇವಾ ಸಂಸೆ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ರಾಜ್ಯ ವಲಯದಡಿ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು 2013-14ನೇ ಸಾಲಿನಿಂದ ಜಿಲ್ಲೆಯಲ್ಲಿ ತೆರೆಯುವ ಸಂಬಂಧವಾಗಿ ಅರ್ಹ ಸ್ವಯಂಸೇವಾ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಸ್ವಯಂಸೇವಾ ಸಂಸ್ಥೆಗಳು ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ನ.11ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಕ್ರಾಸ್, ಕೆ.ಆರ್.ಪುರಂ, ಹಾಸನ ಇವರಿಗೆ ಸಲ್ಲಿಸತಕ್ಕದ್ದು.  ನಿಗಧಿತ ಅರ್ಜಿ ನಮೂನೆಗಾಗಿ ಈ ವಿಳಾಸವನ್ನು ಹಾಗೂ ಮಾಹಿತಿಗಾಗಿ ದೂ  08172-264546 ನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement