ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಧಿಕಾರಿಗಳ ಗೈರು ಲೋಕಾಯುಕ್ತ ಎಸ್ಪಿ ಅಸಮಾಧಾನ

Rashmi Kasaragodu
Updated On : 29 Oct 2013, 11:24 am

ಕ.ಪ್ರ.ವಾರ್ತೆ   ಅರಸೀಕೆರೆ   ಅ. 29
ಲೋಕಾಯುಕ್ತ ಎಸ್ಪಿ ವೇದಮೂರ್ತಿ ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ನಾಫೆಡ್ ಕೊಬ್ಬರಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿದಾಗ ಕಚೇರಿಯಲ್ಲಿ ಯಾವೊಬ್ಬ ಅಧಿಕಾರಿಯೂ ಇರದಿದ್ದುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರದ ಮುಂಭಾಗ ಜಮಾಯಿಸಿದ್ದ ನೂರಾರು ರೈತರು ಕಳೆದ 1-2 ತಿಂಗಳುಗಳಿಂದ ಕೊಬ್ಬರಿ ಖರೀದಿಯ ಸಹಾಯ ಧನ ಈವರೆಗೆ ಬಿಡುಗಡೆಯಾಗಿಲ್ಲ. ಹಣಕ್ಕಾಗಿ ಪ್ರತಿನಿತ್ಯ ಅಲೆಯುವ ಸ್ಥಿತಿ ನಿರ್ಮಾಣಗೊಂಡಿದೆ ಎಂದು ದೂರಿದರು.
ಲೋಕಾಯುಕ್ತರು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಈ ಬಗ್ಗೆ ಮಾತುಕತೆ ನಡೆಸಿದರು.  
ಸರ್ಕಾರದಿಂದ ಹಣ ಬಿಡುಗಡೆಯಾಗಿದೆಯಾದರೂ ಸಾವಿರಾರು ಚೆಕ್ಗಳಿರುವುದರಿಂದ 10-15 ದಿನ ತಡವಾಗಲಿದೆ ಎಂಬ ಉತ್ತರ ಬಂತು. ತಕ್ಷಣವೇ ಲೋಕಾಯುಕ್ತರು ರಾಜ್ಯ ಮಾರುಕಟ್ಟೆ ಫೆಡರೇಷನ್ ವ್ಯವಸ್ಥಾಪಕ ನಿರ್ದೇಶರ ಜತೆ ದೂರವಾಣಿಯಲ್ಲಿ ಮಾತನಾಡಿ, ಸರ್ಕಾರದ ಸಹಾಯಧನ ತಲುಪಿಸಲು  ವಿಳಂಬವಾಗುತ್ತಿರುವುದರಿಂದ ರೈತರಿಗೆ ತೊಂದರೆಯಾಗಿದೆ. ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡು ನಾಲ್ವರು ಸಿಬ್ಬಂದಿಯನ್ನು ಹಾಸನ ಕಚೇರಿಗೆ ತಾತ್ಕಾಲಿಕವಾಗಿ ಕಳುಹಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ ತಕ್ಷಣವೇ ಸಿಬ್ಬಂದಿಯನ್ನು ಕಳುಹಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಲೋಕಾಯುಕ್ತರು ತಿಳಿಸಿದರು.
ಯಾವ ಅಧಿಕಾರಿಯು ಖರೀದಿ ಕೇಂದ್ರ ಕಚೇರಿಯಲಿ ಇರದಿದ್ದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತರು ಯಾವುದೇ ಕಾರಣಕ್ಕೂ ಚೆಕ್ ವಿಳಂಬವಾಗದಂತೆ ಕ್ರಮ ತೆಗೆದುಕೊಳ್ಳುವುದಾಗಿ ರೈತರಿಗೆ ಭರವಸೆ ನೀಡಿದರು.
ಇದಕ್ಕೂ ಮುನ್ನ  ತಾಲೂಕು ಕಚೇರಿಗೆ ಆಗಮಿಸಿದ್ದ ಅವರು ಸರ್ಕಾರದ ನಾನಾ ಯೋಜನೆಗಳಾದ ಸಂಧ್ಯಾಸುರಕ್ಷಾ, ವಿಧವಾವೇತನ, ಅಂಗವಿಕಲರ ವೇತನಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ವಿತರಣೆಯಾಗುತ್ತಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿದರು.
ಈ ವೇಳೆ ಸಂಧ್ಯಾ ಸುರಕ್ಷಾ ಯೋಜನೆಯ 441 ಫಲಾನುಭವಿಗಳಿಗೆ ಹಣ ಬಾರದಿರುವ ಬಗ್ಗೆ ತಹಸೀಲ್ದಾರ್ ಕೇಶವಮೂರ್ತಿರಿಂದ ಸ್ಪಷ್ಟೀಕರಣ ಪಡೆದ ಅವರು ಜಿಲ್ಲೆಯ ಇತರೆಡೆ ನ್ಯಾಯಬೆಲೆ ಅಂಗಡಿಯಲ್ಲಿ 1ಕೆಜಿ ಗೆ ಬದಲಾಗಿ 700ಗ್ರಾಂ ಸಕ್ಕರೆ, 30 ಕೆಜಿ ಅಕ್ಕಿಗೆ ಬದಲಾಗಿ 25 ಕೆಜಿ ನೀಡುತ್ತಿದ್ದು ಹೆಚ್ಚಿನ ಬೆಲೆ ಪಡೆಯುತ್ತಿದ್ದಾರೆ ಎಂಬ ದೂರುಗಳಿದ್ದು ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಹೊಸದಾಗಿ 551 ಫಲಾನುಭವಿಗಳು ಆಯ್ಕೆಯಾಗಿದ್ದು 441 ಜನರಿಗೆ ಕಾರಣಾಂತರಗಳಿಂದ ಹಣ ಬಿಡುಗಡೆಯಾಗಿಲ್ಲ. ಶೀಘ್ರವೇ ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದು ಎಂದ ಅವರು, ತಾಲೂಕಿನ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಹಂಚಿಕೆಯಲ್ಲಿ ಅಂತಹ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ. ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಲೋಪವೆಸಗಿದ್ದ 2 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಲೋಕಾಯುಕ್ತರಿಗೆ ಮಾಹಿತಿ ನೀಡಿದರು. ಇದೇ ವೇಳೆ ನಗರವೃತ್ತ ನಿರೀಕ್ಷಕ ನಂದಕುಮಾರ್ರಿಂದ ಅಗತ್ಯ ಮಾಹಿತಿ ಪಡೆದರು. ಲೋಕಾಯುಕ್ತ ಸಿಬ್ಬಂದಿ ನರಸಿಂಹಮೂರ್ತಿ, ಚಲುವೇಗೌಡ  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement