ಚಿರತೆ ದಾಳಿ: ಯುವಕನಿಗೆ ಗಾಯ
ಹಾಸನ: ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಬುಧವಾರ ನಡೆದಿದೆ. ತಾಲೂಕಿನ ಸಾಲಗಾಮೆ ಹೋಬಳಿಯ ಕಲ್ಲದೇವರಹಳ್ಳಿಯ ಯೋಗೇಶ್ (24) ಚಿರತೆ ದಾಳಿಗೆ ಸಿಲುಕಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಯೋಗೇಶ್ ಬೆಳಗ್ಗೆ ದನಗಳನ್ನು ಜಮೀನಿನಲ್ಲಿ ಕಟ್ಟಲು ಹೋಗಿ ವಾಪಸ್ ಮನೆಗೆ ತೆರಳುವ ಸಂದರ್ಭದಲ್ಲಿ ಚಿರತೆ ಏಕಾಏಕಿ ದಾಳಿ ನಡೆಸಿ ಆತನ ಕೈ ಮತ್ತು ಬೆನ್ನಿಗೆ ತೀವ್ರವಾಗಿ ಗಾಯಗೊಳಿಸಿದೆ. ಕ್ಷಣಾರ್ಧದಲ್ಲಿ ಚಿರತೆ ಬಾಯಿಯಿಂದ ಅವರು ತಪ್ಪಿಸಿಕೊಂಡಿದ್ದಾರೆ. ಕೂಡಲೇ ಯೋಗೇಶ್ರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.