ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸೇನಾ ನೇಮಕಾತಿ ರ್ಯಾಲಿ, ತರಬೇತಿ ಶಿಬಿರ

Rashmi Kasaragodu
Updated On : 31 Oct 2013, 12:09 pm

ಹಾಸನ: ಮಂಡ್ಯದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನ.6ರಿಂದ ನ.14ರ ವರೆಗೆ ಭಾರತೀಯ ಸೇನಾ ಪಡೆಯಲ್ಲಿ ಸೋಲ್ಜರ್ ಜನರಲ್ ಡ್ಯೂಟಿ, ಟಿಕ್ನಿಕಲ್, ಕ್ಲರಿಕಲ್, ಎಸ್.ಕೆ.ಟಿ, ನರ್ಸಿಂಗ್ ಅಸಿಸ್ಟೆಂಟ್, ಟ್ರೇಡ್ಮೆನ್ ಹಾಗೂ ಡಿ.ಎಸ್.ಸಿ ಹುದ್ದೆಗಳ ನೇಮಕಾತಿ ರ್ಯಾಲಿಯು ನಡೆಯಲಿದ್ದು,  ನಿರುದ್ಯೋಗಿ ಯುವಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ. ಈ ನೇಮಕಾತಿ ರ್ಯಾಲಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಪೂರ್ವ ತರಬೇತಿ ಶಿಬಿರವನ್ನು ಅನುಭವಿ ಉಪನ್ಯಾಸಕರಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉಚಿತವಾಗಿ ಸ್ಟಡಿ ಸರ್ಕಲ್ವತಿಯಿಂದ ಆಯೋಜಿಸಲಾಗಿದೆ.
ಅರ್ಹತೆ ಪಡೆದ ಅಭ್ಯರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಉದ್ಯೋಗಾಧಿಕಾರಿ ಜೆ.ಬಿ. ವಿಜಯಲಕ್ಷ್ಮಿ ಕೋರಿದ್ದಾರೆ.  ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ 08172-268374 ಮಾಹಿತಿ ಪಡೆಯಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement