ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಇಂದು ವಿಹಿಂಪ ಪ್ರತಿಭಟನೆ

Rashmi Kasaragodu
Updated On : 31 Oct 2013, 11:23 am

ಕ.ಪ್ರ.ವಾರ್ತೆ   ಸಕಲೇಶಪುರ   ಅ.31
ಶಾದಿಭಾಗ್ಯ ಕಾರ್ಯಕ್ರಮವನ್ನು ಇತರೆ ವರ್ಗಕ್ಕೆ ವಿಸ್ತರಿಸಬೇಕು ಎಂದು ಆಗ್ರಹಿಸಿ ನ.1ರಂದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಸಂತೋಷ ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದ ಮತ ಬ್ಯಾಂಕ್ ರಾಜಕೀಯಕ್ಕೆ ಅಂಕುಶ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಬಹುಸಂಖ್ಯಾತ ವರ್ಗದವರು ಇದರ ಪರಿಣಾಮ ಎದುರಿಸಬೇಕಾಗುತ್ತದೆ. ಹಿಂದೂಗಳಲ್ಲೂ ಸಾಕಷ್ಟು ಬಡವರಿದ್ದು ಬೆಳೆದು ನಿಂತ ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗದೆ ತೊಳಲಾಡುತ್ತಿದ್ದಾರೆ. ಇವರಿಗೂ ಈ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಪಟ್ಟಣದಲ್ಲಿ ಕಳೆದ ಒಂದು ವರ್ಷದ ಹಿಂದೆ ನಡೆದ ಗಲಭೆಯಲ್ಲಿ ಭಾಗಿಯಾಗಿರುವ ಒಂದು ಕೋಮಿನ ಮುಖಂಡರು ಘಟನೆಯಲ್ಲಿ ಸಾಕ್ಷಿಗಳಾಗಿರುವವರಿಗೆ ಜೀವ ಬೆದರಿಕೆ ಕರೆ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸುವ ಮೂಲಕ ಸೂಕ್ತ ರಕ್ಷಣೆ ನೀಡಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ದುಷ್ಯಂತಕುಮಾರ್, ದರ್ಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement