ಕೆ.ವಿ.ಹಿರಿಯಣ್ಣಯ್ಯ ಅರಸೀಕೆರೆ ನಗರ ಬಿಜೆಪಿ ಅಧ್ಯಕ್ಷ
ಅರಸೀಕೆರೆ: ಅರಸೀಕೆರೆ ನಗರ ಬಿಜೆಪಿ ಘಟಕದ ನೂತನ ಅಧ್ಯಕ್ಷ ರನ್ನಾಗಿ ಹಿರಿಯ ವಕೀ ಲ ಕೆ.ವಿ.ಹಿರಿಯ ಣ್ಣಯ್ಯ ಅವ ರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರೇಣುಕುಮಾರ್ ತಿಳಿಸಿದ್ದಾರೆ.
ಬರಲಿರುವ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಸದೃಢವಾಗಿ ಕಟ್ಟುವ ನಿಟ್ಟಿನಲ್ಲಿ ಪಕ್ಷದ ಸಾಮಾನ್ಯ ನಿಷ್ಠಾವಂತ ಕಾರ್ಯಕರ್ತರಾಗಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸಿದ್ದ ಹಿರಿಯ ವಕೀಲರಾದ ಕೆ.ವಿ.ಹಿರಿಯಣ್ಣಯ್ಯರನ್ನು ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ಸರ್ವಾನುಮತದಿಂದ ಅವಿರೋಧ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ತಾಲೂಕಿನ ಎಲ್ಲಾ ಹಿರಿಯ ಮುಖಂಡರು ಮತ್ತು ಯುವ ಕಾರ್ಯಕರ್ತರನ್ನು ಇವರು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಗೆ ಹೆಚ್ಚಿನ ಮಹತ್ವ ನೀಡಬೇಕು ಹಾಗೂ ಕಾರ್ಯಕರ್ತರು ಅವರಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.