ಪ್ರತಿಭಾ ದಿನಾಚರಣೆ
ಹಾಸನ: ನಗರದ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ಆಡಳಿತಾಧಿಕಾರಿ ಎಸ್.ಜೆ.ಐವನ್ ಮಂಡೋನ್ಸಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಭೆ ಮತ್ತು ಶಿಸ್ತು ಒಂದೇ ನಾಣ್ಯದ ಎರಡು ಮುಖಗಳಿದ್ದ ಹಾಗೆ, ಶಿಸ್ತನ್ನು ಹೊರತು ಪಡಿಸಿ ಪ್ರತಿಭೆ ಎಂದಿಗೂ ಪೂರ್ಣತೆ ಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪ್ರಾಂಶುಪಾಲ ದಿನೇಶ್ ಎಂ ಗಾಂವ್ಕರ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರತಿಮಾಪ್ರಭು, ಸಾಂಸ್ಕೃತಿಕ ಸಂಘದ ಸಂಚಾಲಕ ಮಧುಸೂದನ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಒಮರ್ ಜುಬೇರ್, ಸಾಂಸ್ಕೃತಿಕ ಸಂಘದ ವಿದ್ಯಾರ್ಥಿ ಕಾರ್ಯದರ್ಶಿಭಾವನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.