'ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಹಗರಣ ಬಯಲಿಗೆ ಎಳೆಯಿರಿ'
ಹೊಳೆನರಸೀಪುರ: ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ನಡೆಸಿರುವ ಹಗರಣಗಳನ್ನು ಜನ ಸಮಾನ್ಯರಿಗೆ ತಲುಪಿಸುವಲ್ಲಿ ಪಕ್ಷದ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಶ್ರಮಿಸಲಿ ಎಂದು ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಂ.ಎಂ.ರಾಜು ತಿಳಿಸಿದರು. ಪಟ್ಟಣದ ಕಾಳಿಕಾಂಬ ದೇವಾಸ್ಥಾನದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಸುವ ಮೂಲಕ ಹಾಸನ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ತನ್ನದಾಗಿಸಿಕೊಳ್ಳಲಿದೆ ಎಂದು ಇದೆ ವೇಳೆ ಅವರು ಆಶಾ ಭಾವನೆ ವ್ಯಕ್ತ ಪಡಿಸಿದರು.
ದೇಶದೆಲ್ಲೆಡೆ ಮೋದಿ ಅಲೆ: ಬಿಜೆಪಿ ಜಿಲ್ಲಾ ಅಧ್ಯಕ್ಷ ರೇಣುಕುಮಾರ್ ಮಾತನಾಡಿ, ದೇಶದೆಲ್ಲೆಡೆ ಇದೀಗ ಮೋದಿ ಅಲೆ ಎದ್ದಿದೆ ಈ ಭಾರಿ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಅಭಿಪ್ರಾಯವ್ಯಕ್ತಪಡಿಸಿದ ಅವರು ಮೋದಿ ಅವರನ್ನು ಪ್ರಧಾನಿ ಮಾಡಲು ದೇಶದ ಮತದಾರ ತುದಿಗಾಲಲ್ಲಿ ನಿಂತಿದ್ದಾನೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು. ರೇಣುಕುಮಾರ್ ಅವರು ತಾಲೂಕು ಘಟಕಕ್ಕೆ ನೇಮಕಗೊಂಡ ಪದಾಧಿಕಾರಿಗಳಿಗೆ ಪಕ್ಷದ ಶಾಲನ್ನು ಹೊದಿಸುವ ಮೂಲಕ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಜಿಲ್ಲಾ ಬಿಜೆಪಿ ಮುಖಂಡರಾದ ಪರ್ವತಯ್ಯ, ಜಿಲ್ಲಾ ಸಂಚಾಲಕ ಮೈಲಾರಯ್ಯ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.