ಬೀದಿ ಕಾಮಣ್ಣ ಪೊಲೀಸರ ವಶಕ್ಕೆ
ಹಾಸನ: ನಗರದ ಸರ್ಕಾರಿ ಕಲಾ ಕಾಲೇಜಿನ ಹಳೆಯ ವಿದ್ಯಾರ್ಥಿಯೊಬ್ಬ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಚುಡಾಯಿಸಿದ ಪರಿಣಾಮ, ಪೊಲೀಸರ ಅತಿಥಿಯಾಗಿರುವ ಘಟನೆ ಮಂಗಳವಾರ ನಡೆದಿದೆ. ಕಾಲೇಜಿನ ಹಳೆ ವಿದ್ಯಾರ್ಥಿ ಎರಡು ದಿನಗಳ ಹಿಂದೆ ಕಾಲೇಜಿನ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದ, ಈ ಸಂಬಂಧ ಪೊಲೀಸರಿಗೆ ವಿಷಯ ಮುಟ್ಟಿಸಲಾಗಿತ್ತು. ಈ ನಿಟ್ಟಿನಲ್ಲಿ ಪೊಲೀಸರು ಕಾಲೇಜಿಗೆ ಬಂದು ಆತನನ್ನು ವಶಕ್ಕೆ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಆತನ ಬಳಿ ನಕಲಿ ಬಸ್ ಪಾಸ್ ಇದ್ದದ್ದು ಪತ್ತೆಯಾಗಿದೆ. ಆತ ಕಾಲೇಜನ್ನು ಬಿಟ್ಟು ಹೋಗಿದ್ದರೂ ಕಾಲೇಜಿನ ಪಾಸ್ ಆತನ ಬಳಿ ಇದ್ದದ್ದು ಪತ್ತೆಯಾಗಿರುವುದರಿಂದ ಈ ಬಗ್ಗೆ ಪೊಲೀಸರು ಕಾಲೇಜಿಗೆ ಬಂದು ಪ್ರಶ್ನಿಸಿದ್ದಾರೆ. ಆತನಿಗೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಸಹಾಯ ಮಾಡಿರುವುದು ಪತ್ತೆಯಾಗಿದೆ. ಆದರೆ ವಿದ್ಯಾರ್ಥಿಗಳು ತಾವು ಆತನಿಗೆ ಸಹಾಯ ಮಾಡಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲರೊಂದಿಗೆ ವಾಗ್ವಾದ ನಡೆಸಿದರು.