ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಆಂಗ್ಲ ವ್ಯಾಮೋಹ ಗ್ರಾಮೀಣ ಶಾಲೆಯಲ್ಲೂ ಮಕ್ಕಳ ಸಂಖ್ಯೆ ಕ್ಷೀಣ: ಶಾಸಕ

Rashmi Kasaragodu
Updated On : 5 Sept 2013, 12:02 pm

ಕನ್ನಡಪ್ರಭ ವಾರ್ತೆ೤ ಹಾಸನ೤ ಸೆ. 4
ಇಂಗ್ಲಿಷ್ ವ್ಯಾಮೋಹದಿಂದ ಗ್ರಾಮೀಣ ಸರ್ಕಾರಿ ಶಾಲೆಗೆ ಮಕ್ಕಳ ಕೊರತೆ ಉಂಟಾಗಿದೆ ಎಂದು ಶಾಸಕ ಎಚ್.ಎಸ್. ಪ್ರಕಾಶ್ ವಿಷಾದಿಸಿದರು. ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ವೇದಿಕೆ ವತಿಯಿಂದ ಬುಧವಾರ ನಡೆದ 2013-14ನೇ ಸಾಲಿನ ಸಾಂಸ್ಕತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಹೆಣ್ಣು ಮಕ್ಕಳು ಹೆಚ್ಚು ವಿದ್ಯಾಭ್ಯಾಸ ಪಡೆಯುವುದರಿಂದ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಐಎಎಸ್, ಐಪಿಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತರಬೇತಿ ಪಡೆದುಕೊಳ್ಳಬೇಕು ಎಂದರು.
 ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಕ್ಷೇತ್ರ ವ್ಯಾಪಾರೀಕರಣವಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರ ಹದಗೆಡುತ್ತಿದೆ. ನಮ್ಮ ಪುರಾತನ ಕಲೆಯಾದ ಜಾನಪದ ಸಂಸ್ಕತಿಯನ್ನು ಉಳಿಸಿಕೊಳ್ಳುವಲ್ಲಿ ಇಂದಿನ ಯುವಕರು ವಿಫಲರಾಗುತ್ತಿದ್ದಾರೆ. ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪೋಷಕರು ಹೆಣ್ಣು ಮಕ್ಕಳಿಗೆ ಹೆಚ್ಚ-ಹೆಚ್ಚು ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.
 ಹಾಸನಾಂಬ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲೆ ಡಾ. ಎಸ್. ಗೀತಾ  ಮಾತನಾಡಿ, ಮಾಧ್ಯಮಗಳು ಇಂದು ಹೆಣ್ಣು ಮಕ್ಕಳ ಜೀವನದ ಮೇಲೆ ದುಷ್ಪರಿಣಾಮ ಉಂಟುಮಾಡುವ ಮೂಲಕ ಮಾನಸಿಕ ಭಾವನೆ ಮೇಲೆ ಪ್ರಭಾವ ಬೀರುತ್ತಿದೆ. ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಅವಧಿಯಲ್ಲಿ ವಿಷಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಯುವಕರು ಪೋಷಕರ ಹಾಗೂ ಶಿಕ್ಷಕರ ಮಾರ್ಗದರ್ಶನ ಪಡೆದುಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬೇಕು. ಹೆಣ್ಣು ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಬೇಕಾದ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಎಚ್.ಎನ್. ರೂಪ್ರಾಜಚಂದನ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಕರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು. ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಸಂಪೂರ್ಣ ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾಲೇಜುಗಳಲ್ಲಿ ದೊರೆಯುವ ಉತ್ತಮ ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದರು.
  ವೇದಿಕೆ ಸಂಚಾಲಕ ಪ್ರೊ. ಕೆ. ಗುರುರಾಜ್, ಎಂ.ಕೆ. ಮಹೇಶ್, ಡಾ. ಕೆ.ಜಿ. ಕವಿತಾ, ಪ್ರೊ. ಸಾವಿತ್ರಿ, ಡಾ. ಎಂ.ಎನ್. ನಿರ್ವಾಣಿಗೌಡ, ಮೋಹನ್ಕುಮಾರ್, ಪ್ರೊ. ಲೋಕಪ್ಪಗೌಡ, ಡಾ. ಶಶಿ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎ. ಪ್ರಕಾಶ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ದಿಲೀಪಕುಮಾರ್, ಐ.ಕ್ಯೂ.ಎ.ಸಿ. ಸಂಚಾಲಕ ಪ್ರೊ. ಕೆ.ಡಿ. ಮುರಳೀಧರ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement