ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಹಾಸನ: ರಾಜ್ಯ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಸೆ.5 ರಂದು ಬೆಳಗ್ಗೆ 10 ಕ್ಕೆ ಹಾಸನಕ್ಕೆ ಆಗಮಿಸಿ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಅಧಿಕಾರಿಗಳೊಂದಿಗೆ ಚರ್ಚಿಸುವರು ಹಾಗೂ ಸಾರ್ವಜನಿಕರ ಕುಂದು-ಕೊರತೆಗಳ ಪರಿಶೀಲನೆ ನಡೆಸಲಿರುವರು. ಸಂಜೆ 5 ಕ್ಕೆ ಬೆಂಗಳೂರಿಗೆ ತೆರಳುವರು.