ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪಶು ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿಕೆ

Rashmi Kasaragodu
Updated On : 7 Sept 2013, 11:54 am

ಕನ್ನಡಪ್ರಭ ವಾರ್ತೆ೤ ಹಾಸನ೤ ಸೆ. 7
ಹಾಸನ ಪಶು ವೈದ್ಯಕೀಯ ಕಾಲೇಜಿಗೆ ಮಾನ್ಯತೆ ನೀಡುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಸರ್ಕಾರ ಕೂಡಲೇ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದಿದ್ದರೆ ವಿದ್ಯಾರ್ಥಿಗಳೊಂದಿಗೆ ತಾವೂ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
  ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಪಶುವೈದ್ಯಕೀಯ ಕಾಲೇಜು ಪ್ರಾರಂಭವಾಗಿ ಏಳು ವರ್ಷ ಕಳೆದರೂ ಭಾರತೀಯ ಪಶು ವೈದ್ಯಕೀಯ ಪರಿಷತ್ ಮಾನ್ಯತೆ ನೀಡಿಲ್ಲ. ಇದಕ್ಕೆ ಕಾರಣ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂಬುದು.
  ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ಕಾಲೇಜು ಮಂಜೂರಾಯಿತು. ನಂತರ ಬಂದ ಸರ್ಕಾರಗಳು ರಾಜಕೀಯ ದ್ವೇಷದಿಂದ ಈ ಕಾಲೇಜಿಗೆ ಮೂಲಭೂತ ಸೌಲರ್ಕ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
  ಇದರಿಂದ ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಈ ಕಾಲೇಜಿಗೆ ಮಾನ್ಯತೆ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತಕತೆ ನಡೆಸಿದ್ದು, ಅವರು ಸಹ ಮಾನ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಒಂದೆರಡು ದಿನಗಳಲ್ಲಿ ಕಾಲೇಜಿಗೆ ಮಾನ್ಯತೆ ನೀಡಿರುವ ಆದೇಶ ಬರಲಿದ್ದು, ಯಾವುದೇ ವಿದ್ಯಾರ್ಥಿಗಳು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.
 ರಾಜ್ಯ ಸರ್ಕಾರ ಕೂಡಲೇ ಕಾಲೇಜಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಹಾಗೂ ವಿದ್ಯಾರ್ಥಿನಿಲಯ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.
4ನೇ ದಿನಕ್ಕೆ ಪ್ರತಿಭಟನೆ: ಕಾಲೇಜಿಗೆ ಭಾರತೀಯ ಪಶು ವೈದ್ಯಕೀಯ ಪರಿಷತ್ ಮಾನ್ಯತೆ ನೀಡುವಂತೆ ಆಗ್ರಹಿಸಿ ಕೈಗೊಂಡಿರುವ ಪ್ರತಿಭಟನೆ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ ತನ್ನ ಮಲತಾಯಿ ಧೋರಣೆ ಬಿಟ್ಟು ಕಾಲೇಜಿಗೆ ಬೇಕಾಗಿರುವ ಮೂಲ ಸೌಕರ್ಯ ಒದಗಿಸುವ ಮೂಲಕ ಭಾರತೀಯ ಪಶುವೈದ್ಯಕೀಯ ಪರಿಷತ್ನಿಂದ ಮಾನ್ಯತೆ ದೊರೆಯುವಂತೆ ಮಾಡಬೇಕು ಎಂದು ಆಗ್ರಹಿಸಿದರು.
 ಪ್ರಮೋದ್, ನಿತಿನ್, ಕೋಟ್ರೇಶ್, ಮಾರುತಿ, ರಮೇಶ್, ಚೇನತ್, ಕಿರಣ್, ಮಂಜುನಾಥ್, ಸಂತೋಷ್, ಮೋಹನ್, ಪ್ರವೀಣಕುಮಾರ್, ರೋಹಿತ್, ಭೂತೇಶ್, ನವೀನ್, ರವಿಕುಮಾರ್, ಸುರೇಶ್, ಹಿತೈಶಿಣಿ, ರಮ್ಯ, ಕಾವ್ಯ, ಪೂರ್ಣಿಮಾ, ಪಲ್ಲವಿ, ಸಂಧ್ಯಾ ಸೌಮ್ಯ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement