ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪೊಲೀಸ್ ಸಂಪರ್ಕ ಸಭೆಗೆ ಪತ್ರಕರ್ತರಿಗೆ ಪ್ರವೇಶ ಇಲ್ಲ....

Rashmi Kasaragodu
Updated On : 7 Sept 2013, 11:55 am

ಹೊಳೆನರಸೀಪುರ: ಇಲ್ಲಿನ ಪೊಲೀಸ್ ಇಲಾಖೆ ಪಟ್ಟಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಂಪರ್ಕ ಸಭೆಗೆ ಮಾಧ್ಯಮದವರನ್ನು ದೂರವಿರಿಸಿದ ಘಟನೆ ನಡೆದಿದೆ. ನೂತನ ಎಸ್ಪಿ ರವಿ ಡಿ.ಚನ್ನಣ್ಣನವರ್ ಅಧಿಕಾರ ವಹಿಸಿಕೊಂಡ ನಂತರದಲ್ಲಿ ಇಲಾಖೆಯ ಕಾರ್ಯವೈಖರಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಹೆಚ್ಚು ಕ್ರಿಯಾಶೀಲರಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕರ್ತವ್ಯ ನಿರ್ವಹಿಸುವ ಜೊತೆಗೆ, ಸಾರ್ವಜನಿಕರೊಂದಿಗೆ ಪೊಲೀಸರ ಕಾರ್ಯವೈಖರಿ ಹಾಗೂ ಠಾಣೆಗಳಲ್ಲಿ ಸಾರ್ವಜನಿಕರಿಗೆ ದೊರಕುವ ಸವಲತ್ತುಗಳ ಕುರಿತಂತೆ ಇಲಾಖೆಯನ್ನು ಆದಷ್ಟೂ ತೆರದ ಪುಸ್ತಕದಂತೆ ಮಾಡುವ ಹುಮ್ಮಸ್ಸಿನಲ್ಲಿ ನೂತನ ಎಸ್ಪಿಯವರು ಕಾರ್ಯೋನ್ಮುಖರಾಗಿದ್ದಾರೆ.
 ಈ ನಿಟ್ಟಿನಲ್ಲಿ ಎಸ್ಪಿ ರವಿ ಡಿ.ಚನ್ನಣ್ಣನವರ್ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲೂ ಸಾರ್ವಜನಿಕ ಸಂಪರ್ಕ ಸಭೆಗಳನ್ನು ನಡೆಸಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಂಡಿದ್ದಾರೆ.
  ಆದರೆ  ಪಟ್ಟಣದ ಶಾದಿಮಹಲ್ನಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಸಾರ್ವಜನಿಕ ಸಂಪರ್ಕ ಸಭೆಗೆ ಇಲ್ಲಿನ ಪೊಲೀಸ್ ಅಧಿಕಾರಿಗಳು ದೂರವಿಟ್ಟು ಯಾವುದೇ ಮಾಹಿತಿಯನ್ನೂ ನೀಡದೇ ಕೇವಲ ಸಾರ್ವಜನಿಕರನ್ನಷ್ಟೇ ಸಭೆಗೆ ಆಹ್ವಾನಿಸಿದ ಗುಟ್ಟೇನು?.
 ಪೊಲೀಸ್ ಇಲಾಖೆ ಹಾಗೂ ಮಾಧ್ಯಮಗಳು ಉತ್ತಮ ಕಾರ್ಯ ಕೈಗೊಂಡಲ್ಲಿ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು ಹೇಳುವ ಪೊಲೀಸ್ ಇಲಾಖೆ ಅಧಿಕಾರಿಗಳೇ, ಸಾರ್ವಜನಿಕ ಸಂಪರ್ಕ ಸಭೆಗೆ ಮಾಧ್ಯಮದವರನ್ನು ದೂರ ಇಟ್ಟು ಗೌಪ್ಯತೆಯಿಂದ ಸಭೆ ನಡೆಸಿದ್ದಾದರೂ ಏಕೆ ಎಂಬ ಪ್ರಶ್ನೆ ಇಲ್ಲಿನ ಮಾಧ್ಯಮದವರನ್ನು ಕಾಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement