ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮಾನವ ಹಕ್ಕು ಆಯೋಗದ ಸದಸ್ಯರ ಪ್ರವಾಸ

Rashmi Kasaragodu
Updated On : 7 Sept 2013, 11:58 am

ಹಾಸನ: ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ  ಸಿ.ಜಿ.ಹುನಗುಂದ ಅವರು ಸೆ. 17 ಮತ್ತು 18ರಂದು  ಜಿಲ್ಲೆಯಲ್ಲಿ ಪ್ರವಾಸ ಮಾಡಲಿರುವರು. 17ರಂದು ಬೆಳಗ್ಗೆ 11ಕ್ಕೆ  ಹಾಸನಕ್ಕೆ ಆಗಮಿಸುವ ಅವರು ಮಾನವ ಹಕ್ಕುಗಳ ಉಲ್ಲಂಘನೆ ಕುರಿತ ದೂರುಗಳನ್ನು  ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11.30ರಿಂದ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕರಿಂದ ಸ್ವಿಕರಿಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡುವರು ಅಂದು ಹಾಸನದಲ್ಲಿ ವಾಸ್ತವ್ಯ ಮಾಡುವರು. 18ರಂದು ಬೆಳಗ್ಗೆ 11 ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ  ಸಭೆ ನಡೆಸುವರು. ಮ. 3 ಗಂಟೆಗೆ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡುವರು. ಜತೆಗೆ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಲಿರುವರು ನಂತರ ಸಂಜೆ 6 ಕ್ಕೆ  ಸನದಿಂದ ಬೆಂಗಳೂರಿಗೆ ತೆರಳುವರು.
12ರಂದು ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ
ಹಾಸನ: ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಸೆ. 12 ರಂದು  ಬೆಳಗ್ಗೆ 10 ಕ್ಕೆ  ಜಿಲ್ಲಾ ವಾರ್ತಾ ಮತ್ತು  ಪ್ರಚಾರ ಇಲಾಖೆ ಮುಂಭಾಗ ಧ್ವಜಾರೋಹಣ ಹಾಗೂ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಮಹತ್ವ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ  ಸ್ಥಳೀಯ ಶಾಸಕರು ಜಿಲ್ಲಾ ಪಂಚಾಯ್ತಿ  ಅಧ್ಯಕ್ಷರು ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಚುನಾಯಿತ ಪ್ರತಿ ನಿಧಿಗಳು ಜಿಲ್ಲಾ ಸಾಕ್ಷರತಾ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು  ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement