ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ರಸ್ತೆ ಅಭಿವೃದ್ಧಿ ಪಡಿಸಿದರೆ ಸಚಿವರಿಗೆ 'ರಸ್ತೆ ರಾಜ' ಬಿರುದು ನೀಡಿ ಸನ್ಮಾನ....

Rashmi Kasaragodu
Updated On : 7 Sept 2013, 11:53 am

ಹಾಸನ: ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಅಗತ್ಯದಷ್ಟು ಹಣ ನೀಡಿ ಅಭಿವೃದ್ಧಿ ಪಡಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ 'ರಸ್ತೆ ರಾಜ' ಬಿರುದು ನೀಡಿ ಸನ್ಮಾನಿಸಲಾಗುವುದು.... ಹೀಗೆಂದವರು ಜೆಡಿಎಸ್ ಮುಖಂಡ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಬಿಜೆಪಿ ಸರ್ಕಾರದೋರು ರಸ್ತೆಗಳ ಅಭಿವೃದ್ಧಿ ಮಾಡಲಿಲ್ಲ. ಈಗಿನ ಕಾಂಗ್ರೆಸ್ ಸರ್ಕಾರದ ಲೋಕೋಪಯೋಗಿ ಹಾಗೂ ಉಸ್ತುವಾರಿ ಸಚಿವರಾಗಿರುವ ಡಾ.ಎಚ್.ಸಿ. ಮಹಾದೇವಪ್ಪನವರು ರಸ್ತೆಗಳನ್ನು ಅಭಿವೃದ್ಧಿ ಪಡಿಸಿದರೆ ಸಾರ್ವಜನಿಕ ಸಮಾರಂಭ ಏರ್ಪಡಿಸಿ, ಅವರಿಗೆ ರಸ್ತೆ ರಾಜ ಎಂಬ ಬಿರುದು ನೀಡಿ ಗೌರವಿಸಲಾಗುವುದು ಎಂದು ಹೇಳಿದರು. ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಸಚಿವರು ಬಿರುದು ಪಡೆದುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.  ನ್ಯಾಯಾಲಯದ ಆದೇಶ ಮೇರೆಗೆ ದುದ್ದ ರಸ್ತೆ ಕಾಮಗಾರಿ ಆರಂಭವಾಗುತ್ತಿರುವುದನ್ನು ತಿಳಿದು ಕೆಲ ಕಾಂಗ್ರೆಸ್ ಮುಖಂಡರನ್ನು ಕರೆದೊಯ್ದು ಪರಿಶೀಲನೆ ನಡೆಸಿದ್ದಾರೆ.ತೆಂಗು, ಕಾಫಿ, ಮೆಣಸು, ಏಲಕ್ಕಿ ಮತ್ತಿತರ ಬೆಳೆಗಳು ಹಾನಿಯಾಗಿರುವ ಬಗ್ಗೆ ಗಮನಹರಿಸದೆ ದ್ವೇಷ ರಾಜಕಾರಣಕ್ಕೆ ನಾಂದಿ ಹಾಡಲಾಗುತ್ತಿದೆ ಎಂದು ಟೀಕಿಸಿದರು.


ದುದ್ದ ರಸ್ತೆ ಸೇರಿದಂತೆ ನೆನೆಗುದಿಗೆ ಬಿದ್ದಿರುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆರಂಭಿಸುವಂತೆ ದೇವೇಗೌಡರು 18 ಬಾರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹಾಸನ ಜಿಲ್ಲಾಧಿಕಾರಿ ಮತ್ತು ಸಿಎಂ ನಿವಾಸದ ಬಳಿ ಧರಣಿ ಸಹ ನಡೆಸಿದ್ರು...
ಟಿ  ಎಚ್.ಡಿ. ರೇವಣ್ಣ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement