ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಗಗನಮುಖಿ ಬೆಲೆ ಏರಿಕೆ ನಡುವೆ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ

Mainashree
Updated On : 8 Sept 2013, 8:58 am

ಹಾಸನ: ಒಂದೆಡೆ ತುಂತುರು ಮಳೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆಯೇ ಸಂಭ್ರಮದಿಂದ ಗಣೇಶ ಹಬ್ಬ ಆಚರಿಸಲು ಜಿಲ್ಲೆಯ ಜನತೆ ಪೂರ್ವ ಸಿದ್ದತೆಯನ್ನು ಭಾನುವಾರ ನಡೆಸಿದರು.
ನಗರದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಜನರು ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಮಗ್ನರಾಗಿ ಬೆಲೆಗಳನ್ನು ಲೆಕ್ಕಿಸದೆ ಖರೀಸಿದರು. ಎಲ್ಲಾ ವಸ್ತುಗಳ ಬೆಲೆ ಏರಿಕೆ ಗಗನಮುಖಿ. ಕಳೆದ ವರ್ಷಕ್ಕಿಂತಲೂ ಈ ಬಾರಿ ವಸ್ತುಗಳ ಬೆಲೆ ಏರಿಕೆಯಾಗಿದ್ದು, ವ್ಯಾಪಾರ ಮಂದಗತಿಯಲ್ಲಿ ನಡೆಯಿತು. ಹೂವು ಮತ್ತು ಹಣ್ಣಿನ ಬೆಲೆ ಕೊಂಚ ಏರಿಕೆಯಾಗಿದೆ. ಆದರೆ ಜನರು ಇದನ್ನು ಲೆಕ್ಕಿಸದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ನಿರತರಾಗಿದ್ದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.  ಗ್ರಾಮೀಣ ಪ್ರದೇಶಗಳಲ್ಲಿ ಬೆಳಗೆ ಬೇಗ ಎದ್ದು ಮನೆಯನ್ನೆಲ್ಲ ಸ್ವಚ್ಚಗೊಳಿಸಿ ಬಾಗಿಲಿಗೆ ಮಾವಿನ ತೋರಣ ಕಟ್ಟಿ ಮನೆಯನ್ನು ಸಿಂಗರಿಸಲಾಗುತ್ತದೆ. ಮನೆಗಳಲ್ಲಿ ಗೌರಿ ಗಣೇಶನನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸುತ್ತಾರೆ.  ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿಯೂ ಹಬ್ಬದ ಸೊಗಡು ದಿನ ದಿನಕ್ಕೆ ಕಡಿಮೆಯಾಗುತ್ತಿದೆ. ಜನರು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ, ದುಡಿಮೆ, ಸಂಪಾದನೆಯಲ್ಲಿ ಲೀನವಾಗಿ ಸಂಪ್ರದಾಯ, ಆಚಾರ-ವಿಚಾರಗಳಿಗೆ ಅಷ್ಟು ಪ್ರಾಮುಖ್ಯತೆ ನೀಡುತ್ತಿಲ್ಲ. ಅಲ್ಲದೆ ಅಗತ್ಯ ವಸ್ತುಗಳ ಬೆಲೆಗಳೂ ಹೆಚ್ಚಾಗುತ್ತಿರುವುದರಿಂದ ಹಬ್ಬದ ಆಚರಣೆಯತ್ತ ಜನರ ಗಮನವೂ ಒಂದು ರೀತಿಯಲ್ಲಿ ಕುಗ್ಗುತ್ತಿದೆ.
ಮಾವಿನ ಎಲೆ ಕಟ್ಟಿಗೆ 10 ರು.: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹಳದಿ ಸೇವಂತಿಗೆ, ಬಣ್ಣದ ಸೇವಂತಿಗೆ, ಮಲ್ಲಿಗೆ ಹೂವು, ಕಾಕಡ ಹೂವು, ಕನಕಾಂಬರದ ಬೆಲೆ ಗಗನಕ್ಕೇರಿದೆ. ಮಾವಿನ ಸೊಪ್ಪು ಒಂದು ಕಟ್ಟಿಗೆ 10 ರು. ಆಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement