ಗಣೇಶ ಪ್ರತಿಷ್ಠಾಪನೆಗೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಸಲಹೆ
ಹಾಸನ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಿ, ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಸದರಿ ಸ್ಥಳಗಳಲ್ಲಿ ವಿದ್ಯುತ್ತಿನ ಅವಶ್ಯಕತೆಯಿದ್ದಲ್ಲಿ ಸಂಬಂಧಿಸಿದ ಸೆಸ್ಕ್ ಉಪ ವಿಭಾಗ, ಶಾಖಾ ಕಚೇರಿಗಳಲ್ಲಿ ಅಧಿಕೃತವಾಗಿ ಅರ್ಜಿ ಸಲ್ಲಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಬೇಕಾಗಿದೆ. ಅಧಿಕೃತ ನೇರ ಸಂಪರ್ಕದಲ್ಲಿ ವಿದ್ಯುತ್ ಪಡೆದುಕೊಂಡು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದೆಂದು ಚಾವಿಸನಿನಿ, ವೃತ್ತ ಕಚೇರಿ ಅಧೀಕ್ಷಕ ಇಂಜಿನಿಯರ್ ಮನವಿ ಮಾಡಿದ್ದಾರೆ.