ಜಿಲ್ಲಾ ಎನ್ಎಸ್ಎಸ್ ಅಧಿಕಾರಿಗಳ ಸಭೆ
ಚನ್ನರಾಯಪಟ್ಟಣ: ತಾಲೂಕಿನ ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಎಂ. ರುದ್ರಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಎನ್ಎಸ್ಎಸ್ ಅಧಿಕಾರಿಗಳ ಸಭೆ ನಡೆಯಿತು.
2013-14ನೇ ಸಾಲಿನ ಜಿಲ್ಲಾ ಮಟ್ಟದ ಅಂತರ ಕಾಲೇಜು ವಾರ್ಷಿಕ ಶಿಬಿರ ನಡೆಸುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಯಿತು. ಪ್ರಸಕ್ತ ಸಾಲಿನ ಶಿಬಿರವನ್ನು ಹೊಳೆನರಸೀಪುರ ತಾಲೂಕಿನ ತೆರಣ್ಯ ಗ್ರಾಮದಲ್ಲಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವ್ಯವಸ್ಥಾಪಕ ಚಂದ್ರಹಾಸ್, ಪ್ರಾಂಶುಪಾಲ ಪ್ರೊ. ನಂಜುಂಡಸ್ವಾಮಿ, ಎನ್ಎಸ್ಎಸ್ ಅಧಿಕಾರಿ ಪ್ರೊ. ಸಿ.ಎಲ್. ಶಿವಕುಮಾರ್ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳು ಇದ್ದರು.