ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ತಾಲೂಕಿನಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ: ಬಾಲಕೃಷ್ಣ

Mainashree
Updated On : 8 Sept 2013, 8:59 am

ಚನ್ನರಾಯಪಟ್ಟಣ: ತಾಲೂಕಿನಲ್ಲಿ ನಿರಂತರ ವಿದ್ಯುತ್ ಪೂರೈಸುವ ಸಲುವಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಪಟ್ಟಣದ ಎಲೆಕ್ಟ್ರಿಕಲ್
ವೈಂಡಿಂಗ್ ಸಂಘ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು,  ನಿರಂತರವಾಗಿ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ವಿತರಣಾ ಕೇಂದ್ರಗಳಿಗೆ ಸೂಚನೆ ನೀಡಿದ್ದು, ಯಾವುದೇ ಕಾರಣದಿಂದ ರೈತರಿಗೆ ಹಾಗೂ ಗ್ರಾಮೀಣ ಪ್ರದೇಶದ ಜನತೆಗೆ ಅನ್ಯಾಯವಾಗದಂತೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಕೋರಲಾಗಿದೆ ಎಂದು ಅವರು ತಿಳಿಸಿದರು.
ವಿದ್ಯುತ್ ಅಡಚಣೆಯಾದ ಸಂದರ್ಭದಲ್ಲಿ ರಿಪೇರಿ ಮಾಡಲು ತಾಲೂಕಿಗೆ ಎಲ್ಲಾ ವ್ಯವಸ್ಥೆಯಿರುವ ಸುಸಜ್ಜಿತ ವಾಹನವನ್ನು ನೀಡಲು ಒಪ್ಪಿಗೆ ನೀಡಿದ್ದು, ದಿನದ 24ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದರು.
ಪಟ್ಟಣದಲ್ಲಿ ಸಮಗ್ರ ವಿದ್ಯುತ್ ಪೂರೈಕೆಗಾಗಿ 53 ಟ್ರಾನ್ಸ್‌ಫಾರ್ಮರ್ ಅಳವಡಿಸಲಾಗಿದ್ದು, ವೋಲ್ಟೇಜ್ ಸಮಸ್ಯೆ ಇಲ್ಲದಾಗಿದೆ. ಗ್ರಾಮೀಣ ಪ್ರದೇಶದಲ್ಲಿ 200 ಬೋರ್‌ವೆಲ್ ಕೊರೆಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ ಎಂದು ಹೇಳಿದರು. ಪುರಸಭಾಧ್ಯಕ್ಷ ಮಂಜಣ್ಣ, ಉಪಾಧ್ಯಕ್ಷೆ ಗೀತಾ, ನವೋದಯ ವಿದ್ಯಾ ಸಂಸ್ಥೆ ಮಾಜಿ ಅಧ್ಯಕ್ಷ ರಾಮಚಂದ್ರ, ಸಂಘದ ಅಧ್ಯಕ್ಷ ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement