ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹಬ್ಬದಂದೂ ನಿಲ್ಲದ ಪಶು ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ

Mainashree
Updated On : 8 Sept 2013, 9:01 am

ಕ.ಪ್ರ. ವಾರ್ತೆ೤ ಹಾಸನ೤ ಸೆ. 8
ಮಾನ್ಯತೆ ನೀಡುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿರುವ ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಗೌರಿ-ಗಣೇಶ ಹಬ್ಬದ ದಿನವಾದ ಭಾನುವಾರ ಸಹ ಪ್ರತಿಭಟನೆ ಮುಂದುವರೆಸಿದ್ದು, ವಿದ್ಯಾರ್ಥಿಗಳ ಧರಣಿ 5ನೇ ದಿನಕ್ಕೆ ಕಾಲಿಟ್ಟಿದೆ.  ಹಾಸನ ಪಶುವೈದ್ಯಕೀಯ ಕಾಲೇಜಿಗೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನೂತನ ಕಾಲೇಜು ಮುಂಭಾಗ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದಾರೆ. ತಮಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ ಪ್ರತಿಭಟನಕಾರರು, ಎಲ್ಲೆಡೆ ಗೌರಿ-ಗಣೇಶ ಹಬ್ಬವನ್ನು ಆಚರಿಸುತ್ತಿದ್ದರೆ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಕೂಡಲೇ ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿ ಕಾಲೇಜಿಗೆ ಮಾನ್ಯತೆ ನೀಡುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement