ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಯಗಚಿ ಶಾಲೆ ವಿದ್ಯಾರ್ಥಿಗಳ ಸಾಧನೆ

Rashmi Kasaragodu
Updated On : 11 Sept 2013, 1:03 am

ಹಾಸನ: ಇತ್ತೀಚೆಗೆ ನಡೆದ ಗ್ರಾಮಾಂತರ ದಕ್ಷಿಣ ವಲಯ ಕ್ರೀಡಾಕೂಟದಲ್ಲಿ ಕಂದಲಿಯ ಯಗಚಿ ಪ್ರೌಢಶಾಲೆ ವಿದ್ಯಾಥಿಗಳಾದ ಕೆ.ಕೆ. ಕೌಶಿಕ್ ಹ್ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ, ಗುಂಡು ಎಸೆತದಲ್ಲಿ  ದ್ವಿತೀಯ ಹಾಗೂ ಭರ್ಚಿ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಎಸ್.ಎನ್. ದರ್ಶನ್ 100 ಮೀ. ಓಟದಲ್ಲಿ ದ್ವಿತೀಯ, 200 ಮೀ. ನಲ್ಲಿ  ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೆ.ಎಲ್. ಭವನ್ 800 ಮೀ. ಓಟದಲ್ಲಿ ಪ್ರಥಮ, 1500 ಮೀ ಓಟದಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ. ಡಿ.ಟಿ. ಜೀವನ್ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಬಾಲಕರ  100 ಮೀ ಓಟದ ತಂಡ ದ್ವಿತೀಯ ಸ್ಥಾನ ಪಡೆದಿದ್ದು, ಗುಂಪು  ಆಟದಲ್ಲಿ ಬಾಲಕರ ಮತ್ತು ಬಾಲಕಿಯರ  ಖೋಖೋ ತಂಡಗಳು ದ್ವಿತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement