ಸಮಾಜ ಏಳ್ಗೆಗೆ ಶಿಕ್ಷಕರ ಪಾತ್ರ ಮುಖ್ಯವಾದುದು'
ಹಾಸನ: ಸಮಾಜದ ಏಳಿಗೆಯಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಶಿಕ್ಷಕ ವೃಂದದವರು ವಿದ್ಯಾರ್ಥಿಗಳ ಏಳಿಗೆಗೆ ಶ್ರಮ ವಹಿಸುತ್ತಿದ್ದಾರೆ ಎಂದು ಸುಜಲಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಿ.ಸುಬ್ಬೇಗೌಡ ತಿಳಿಸಿದರು.
ನಗರದ ಸುಜಲಾ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಎಸ್. ಲೋಕೇಶ್, ಸುಜಲ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕುಮಾರ್, ಸುಜಲ ಪಿಯು ಕಾಲೇಜಿನ ಪ್ರಾಂಶುಪಾಲ ಜುಲ್ಫೀಕರ್ ಅಹಮ್ಮದ್, ಬೋಧಕ, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿನಿ ವಿ.ಶೃತಿ ಪ್ರಾರ್ಥಿಸಿದರು. ವಿದ್ಯಾರ್ಥಿ ಕುಶಾಲ್ಗೌಡ, ಶ್ರೀನಿವಾಸ್ ಕೃಷ್ಣ ಅನಿಸಿಕೆ ಹಂಚಿಕೊಂಡರು. ಲಕ್ಷ್ಮೀ ನಿರೂಪಿಸಿದರು.