ಹೊನ್ನೇನಹಳ್ಳಿ ಕೂಡಿಗೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಆಲೂರು: ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಹೊನ್ನೇನಹಳ್ಳಿ ಕೂಡಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರು 600 ಮೀ. ಓಟ, 400 ಮೀ. ಓಟ ಮತ್ತು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ವಾಲಿಬಾಲ್ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ವಿಭಾಗವು 400 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಖ್ಯ ಶಿಕ್ಷಕ ಕೆ.ಚಂದ್ರಯ್ಯ, ಸಹ ಶಿಕ್ಷಕ ಶಿವಕುಮಾರ್, ನಜರಿನ್ತಾಜ್, ಸಂಶುನ್ನೀಸಾ ಅವರು ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ.