ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸುದ್ದಿ ಸಂಕ್ಷೇಪ

Mainashree
Updated On : 13 Sept 2013, 9:05 am

ಇಂದು ಕಾನೂನು ಕಾರ್ಯಾಗಾರ
ಹೊಳೆನರಸೀಪುರ: ಇಲ್ಲಿನ ರೋಟರಿ ಸಂಸ್ಥೆ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ.14ರಂದು ತಾಲೂಕಿನ ಹಳೇಕೋಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಅಧ್ಯಕ್ಷ ಆರ್.ಬಿ.ಪುಟ್ಟೇಗೌಡ ಹಾಗೂ ಕಾರ್ಯದರ್ಶಿ ಎಚ್.ಆರ್.ಶಿವಕುಮಾರ್ ತಿಳಿಸಿದ್ದಾರೆ. ಬೆಳಿಗ್ಗೆ 10ಕ್ಕೆ ನ್ಯಾ. ಡಿ.ಕಂಬೇಗೌಡ ಕಾರ್ಯಾಗಾರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಿ.ವಿ.ಸನತ್, ಸಹಾಯಕ ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ದೊಡ್ಡಗೌಡರ್, ಕಾಲೇಜು ಪ್ರಾಂಶುಪಾಲ ಕೆ.ಜವರಯ್ಯ, ಮುಖ್ಯೋಪಾಧ್ಯಾಯಿನಿ ಜೆ.ಕಾಂತ ಹಾಗೂ ರೋಟರಿ ಪದಾಧಿಕಾರಿಗಳು ಹಾಜರಿರುವರು.

ಇಂದು ಸರ್ವ ಸದಸ್ಯರ ಸಭೆ
ಹೊಳೆನರಸೀಪುರ: ತಾಲೂಕು ಒಕ್ಕಲಿಗರ ನೌಕರರ ಕ್ಷೇಮಾಭಿವೃದ್ಧಿ ಸಂಘವು ಪಟ್ಟಣದ ಶಂಕರಮಠದಲ್ಲಿ ಸೆ.14 ರಂದು 2003ರಿಂದ 2013ರವರೆಗಿನ ಸಂಘದ ಲೆಕ್ಕಪತ್ರ ವಿವರ ಮತ್ತು 2012-13ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹುಚ್ಚೇಗೌಡ ತಿಳಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರಧಾನ ಭಾಷಣಕಾರರಾಗಿ ಮದ್ದೂರು ತಾ. ತಹಸೀಲ್ದಾರ ಡಾ.ಎಚ್.ಎಲ್. ನಾಗರಾಜು ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕಿನ ಒಕ್ಕಲಿಗ ಬಂಧುಗಳು ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಹುಚ್ಚೇಗೌಡ ತಿಳಿಸಿದ್ದಾರೆ.

ಇಂದು ಪ್ರಜಾಪ್ರಭುತ್ವ ದಿನಾಚರಣೆ
ಹೊಳೆನರಸೀಪುರ: ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.14ರಂದು ಬೆಳಿಗ್ಗೆ 11ಕ್ಕೆ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಪ್ರಜಾಪ್ರಭುತ್ವ ವೇದಿಕೆ ಉದ್ಘಾಟನಾ ಸಮಾರಂಭ ಮತ್ತು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಶಾಸ್ತ ವಿಭಾಗದ ಪ್ರಾಧ್ಯಾಪಕ ಪ್ರೊ.ಜಿ.ಸುನೀತ ತಿಳಿಸಿದ್ದಾರೆ. ಹಾಸನದ ಎನ್‌ಡಿಆರ್‌ಕೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಆರ್.ರಮೇಶ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಸವಣ್ಣ ವಹಿಸಲಿದ್ದು, ಅಪರ ಆರಕ್ಷಕ ಅಧೀಕ್ಷಕ ಜೆ.ಕೆ.ರಶ್ಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement