ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅರಕಲಗೂಡು: ನಕಲಿ ರಸಗೊಬ್ಬರ ಮಾರಾಟ

Mainashree
Updated On : 14 Sept 2013, 9:17 am

ಕನ್ನಡಪ್ರಭ ವಾರ್ತೆ೤ ಹಾಸನ೤ ಸೆ.14
ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಯ ಕೆಲ ಅಂಗಡಿಗಳಲ್ಲಿ ನಕಲಿ ಕ್ರಿಮಿನಾಶಕ ಹಾಗೂ ರಸಗೊಬ್ಬರ ಮಾರಾಟ ಮಾಡುತ್ತಿದ್ದು, ಇದರ ವಿರುದ್ಧ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ರೈತಸಂಘದ ಮುಖಂಡ ಹೋತಿ ಹುಚ್ಚಪ್ಪ ಎಚ್ಚರಿಕೆ ನೀಡಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಬಳಿಯ ಕಾವೇರಿ ಹೈಟೆಕ್ ಆಗ್ರೋ ಏಜೆನ್ಸಿಯಲ್ಲಿ ಬವಿಸ್ತೀನ್ ಎಂಬ ನಕಲಿ ಕ್ರಿಮಿನಾಶಕ ಮಾರಾಟ ಮಾಡಲಾಗುತ್ತಿದೆ. ಈ ಕ್ರಿಮಿನಾಶಕವನ್ನು ತರಕಾರಿ ಹಾಗೂ ಕೆಲ ಹಣ್ಣುಗಳಿಗೆ ಸಿಂಪಡಿಸಲಾಗುತ್ತದೆ. ಒಂದು ಪ್ಯಾಕೆಟ್‌ಗೆ 80 ರು.ಗಳಂತೆ ಮಾರಾಟ ಮಾಡಲಾಗುತ್ತಿದೆ. ಈ ಅಂಗಡಿಯಲ್ಲಿ ಒಂದೇ ಹೆಸರಿನ ನಕಲಿ ಮತ್ತು ಅಸಲಿ ಕ್ರಿಮಿನಾಶಕಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಈ ಕ್ರಿಮಿನಾಶಕ ತರಕಾರಿಗಳಿಗೆ ಸಿಂಪಡಿಸಿದ ಮೇಲೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಈ ಬಗ್ಗೆ ರೈತರು ಅಂಗಡಿಯವರನ್ನು ಕೇಳಲು ಹೋದರೆ ಬೆದರಿಕೆ ಒಡ್ಡುತ್ತಿದ್ದಾರೆ. ಹಲವು ರೈತರು ಈ ನಕಲಿ ಕ್ರಿಮಿನಾಶಕ ಖರೀದಿಸಿ ಮೋಸ ಹೋಗಿದ್ದಾರೆ. ಒಂದೇ ಅಂಗಡಿಯಲ್ಲಿ ಅಸಲಿ ಮತ್ತು ನಕಲಿ ಕ್ರಿಮಿನಾಶಕ ಮಾರಾಟ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿದರು. ನಕಲಿ ಕ್ರಮಿನಾಶಕ ಮಾರಾಟ ಮಾಡುತ್ತಿರುವ ಬಗ್ಗೆ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ದೂರು ನೀಡಿದ್ದರೂ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಈ ಅಂಗಡಿಯಲ್ಲಿ ನಕಲಿ ಕ್ರಿಮಿನಾಶಕ ಹಾಗೂ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಎಂದರು. ನಕಲಿ ಮಾರಾಟದ ಹಿಂದೆ ದೊಡ್ಡ ಮಾರಾಟಗಾರರ ಜಾಲವಿದ್ದು, ಈ ವಿರುದ್ಧ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಾಗೂ ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಅಂಗಡಿಗಳಲ್ಲಿ ನಕಲಿ ರಸಗೊಬ್ಬರ, ಔಷಧ ಮಾರಾಟವಾಗುತ್ತಿದೆ. ಅಧಿಕಾರಿಗಳಿಗೆ ರೈತರ ಬಗ್ಗೆ ಸಲ್ಪವು ಕಾಳಜಿ ಇಲ್ಲದಂತಾಗಿದೆ ಎಂದು ದೂರಿದರು. ಇಂಥ ಮಾರಾಟಗಾರರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement